ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ್ರಧಾನಿ ಕೆಪಿ ಓಲಿ, ಪ್ರಧಾನಿ, ಅಧ್ಯಕ್ಷರ ನಿವಾಸಕ್ಕೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಜೀವ ದಹನ ! 

09-09-25 11:09 pm       HK News Desk   ದೇಶ - ವಿದೇಶ

ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು ಜನರು ಸಂಸತ್ತು, ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಇದರ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. 

ನವದೆಹಲಿ, ಸೆ.9 : ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು ಜನರು ಸಂಸತ್ತು, ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಇದರ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. 

ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತ ಸುಟ್ಟು ಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಿಯೇ ಅವರು ಸಾವನ್ನಪ್ಪಿದ್ದರು.

Gen Z Protest In Nepal Live: PM KP Oli Resignation Live | Nepal Social  Media Ban, Anti Corruption Protest | YouTube, X, Instagram Facebook Banned  in Nepal - World News | The Financial Express

What's next for Nepal? KP Sharma Oli resigns after violent Gen Z protests,  parliament torched; question mark over next government - The Times of India

Time For Restraint': Kathmandu Mayor, Army, Civil Servants Urge Calm As  Nepal PM Oli Resigns | World News - News18

Nepal Gen Z Protest Live: Nepal Army to take charge of security after 10 pm  on Tuesday following violent protests - The Economic Times

Nepal Army to take charge after PM, key ministers resign as protests spiral  - India Today

Nepal Gen Z Protest Live Updates: Oli cabinet to 'continue until new  government is formed', says Paudel; Army vows to – Firstpost

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚಾಗಿದೆ. ಪ್ರತಿಭಟನಾಕಾರರು ಭಯೋತ್ಪಾದಕರಂತೆ ವರ್ತಿಸುತ್ತಿದ್ದು ಸೇನೆ, ಪೊಲೀಸರನ್ನು ಲೆಕ್ಕಿಸದೆ ಹಿಂಸಾಚಾರಕ್ಕೆ ಇಳಿದಿದ್ದಾರೆ. ನೇಪಾಳದ ಬೆಳವಣಿಗೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳವಳ, ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಚಿವನನ್ನು ಹೊಡೆದು ಅಟ್ಟಾಡಿಸಿದ ಜನರು ! 

ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ಅವರನ್ನು ಪ್ರತಿಭಟನಾಕಾರರು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ. ಇದರ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸಚಿವ ಬಿಷ್ಣು ಪೌಡೆಲ್ ರನ್ನು ಸುಮಾರು 25ಕ್ಕೂ ಅಧಿಕ ಮಂದಿ ಅಟ್ಟಾಡಿಸಿ ಹೊಡೆದಿದ್ದಾರೆ. ಪೌಡೆಲ್ ಜೀವ ಉಳಿಸಿಕೊಳ್ಳಲು ಓಡುತ್ತಿದ್ದು, ಈ ವೇಳೆ ಎರಡು ಡಜನ್‌ಗೂ ಹೆಚ್ಚು ಜನರು ಅವರನ್ನು ಬೆನ್ನಟ್ಟುತ್ತಿರುವುದು ಕಂಡುಬಂದಿದೆ.

Nepal Prime Minister K.P. Sharma Oli on Tuesday (September 9, 2025) resigned amid continuing anti-corruption protests across the country.  Protests led by Nepal’s Gen Z continued for a second day on Tuesday (September 9, 2025), despite local administrations in three districts of the Kathmandu Valley imposing a curfew from the morning.