ಬ್ರೇಕಿಂಗ್ ನ್ಯೂಸ್
01-10-25 05:32 pm HK News Desk ದೇಶ - ವಿದೇಶ
ಭೋಪಾಲ್, ಅ.1: ಕೇವಲ 15 ದಿನಗಳ ಅಂತರದಲ್ಲಿ ಆರು ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಇದಕ್ಕೆ ಕೆಮ್ಮಿನ ಸಿರಪ್ ಅಡ್ಡ ಪರಿಣಾಮ ಕಾರಣ ಎಂಬ ಆರೋಪ ಕೇಳಿಬಂದಿದೆ.
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಜ್ವರದಿಂದ ಸಾವು ಎಂದು ಹೇಳಲಾಗಿತ್ತು. ಇದೀಗ ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ ನ ಅಡ್ಡ ಪರಿಣಾಮದಿಂದಾಗಿ ಕಿಡ್ನಿ ವೈಫಲ್ಯಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳು ಐದು ವರ್ಷದ ಒಳಗಿನವರಾಗಿದ್ದು, ಎಲ್ಲ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರಕ್ಕಾಗಿ ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್ ಸೇರಿದಂತೆ ನಿಯಮಿತ ಔಷಧಿಗಳನ್ನು ಸೂಚಿಸಿದ್ದರು.
ಔಷಧಿ ಸೇವಿಸಿದ ನಂತರ ಮಕ್ಕಳು ಚೇತರಿಸುತ್ತಿರುವಂತೆ ತೋರುತ್ತಿತ್ತು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ರೋಗ ಲಕ್ಷಣಗಳು ಮರಳಿದವು. ನಂತರ ಮೂತ್ರ ವಿಸರ್ಜನೆಯಲ್ಲಿ ಹಠಾತ್ ಮತ್ತು ಆತಂಕಕಾರಿ ಇಳಿಕೆ ಕಂಡುಬಂದಿತು. ಇದರಿಂದ ಮೂತ್ರಪಿಂಡದ ಸೋಂಕು ಉಂಟಾಗಿತ್ತು. ಬಳಿಕ ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ದುಃಖದಿಂದ ಮಾತನಾಡಿರುವ ಪೋಷಕರು, ನಮ್ಮ ಮಕ್ಕಳು ಹಿಂದೆಂದೂ ಅನಾರೋಗ್ಯಕ್ಕೆ ಒಳಗಾಗಿರಲಿಲ್ಲ. ಈ ಬಾರಿ ಅವರಿಗೆ ಸಣ್ಣ ಜ್ವರವಿತ್ತು. ಸಿರಪ್ ನಂತರ, ಅವರ ಮೂತ್ರ ನಿಂತುಹೋಯಿತು. ನಾವು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂದು ಶಂಕಿಸಲಾಗುತ್ತಿದ್ದು, ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮಕ್ಕಳ ಮೂತ್ರಪಿಂಡದ ಬಯಾಪ್ಸಿ ಪರೀಕ್ಷೆಯಲ್ಲಿ ಔಷಧೀಯ ವಿಷಕ್ಕೆ ಸಂಬಂಧಿಸಿದ ಡೈಥಿಲೀನ್ ಗ್ಲೈಕಾಲ್ ಮಾಲಿನ್ಯ ಇರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಸಂತ್ರಸ್ಥ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ (Coldrif and Nextro-DS) ಸಿರಪ್‌ಗಳನ್ನು ನೀಡಲಾಗಿತ್ತು.
ಶಂಕಿತ ಸಿರಪ್ ಗೆ ನಿಷೇಧ ಹೇರಿದ ಡಿಸಿ
ಚಿಂದ್ವಾರ ಜಿಲ್ಲೆಯ ಕಲೆಕ್ಟರ್ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್‌ಗಳ ಮಾರಾಟವನ್ನು ನಿಷೇಧಿಸಿದ್ದಾರೆ. "ಬಯಾಪ್ಸಿ ವರದಿ ಕಲುಷಿತ ಔಷಧ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವೆಂದು ಸೂಚಿಸುತ್ತದೆ. ಪೀಡಿತ ಹಳ್ಳಿಗಳಿಂದ ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಅದರಲ್ಲಿ ಯಾವುದೇ ಮಾಲಿನ್ಯ ತೋರಿಸಿಲ್ಲ ಎಂದು ಜಿಲ್ಲಾಧಿಕಾರಿ ಶೀಲೇಂದ್ರ ಸಿಂಗ್ ಹೇಳಿದರು.
In Madhya Pradesh’s Chhindwara district, six children under the age of five have died within 15 days, allegedly due to kidney failure caused by contaminated cough syrup. Parents reported that their children, initially treated for mild fever and cold with syrups Coldrif and Nextro-DS, developed alarming symptoms including reduced urination, leading to kidney infections. Despite advanced treatment in Nagpur, several children could not be saved.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am