Navi Mumbai International Airport, PM Narendra Modi: ದೇಶದ ಅತಿದೊಡ್ಡ ವಿಮಾನ ನಿಲ್ದಾಣ ಮುಂಬೈನಲ್ಲಿ ಲೋಕಾರ್ಪಣೆ ; ಹೊಸ ಏರ್ಪೋರ್ಟ್ ಒಳಗಡೆ ಸುತ್ತಾಡಿ ಪ್ರಧಾನಿ ಮೋದಿ ಸ್ವತಃ ಪರಿಶೀಲನೆ 

08-10-25 08:57 pm       HK News Desk   ದೇಶ - ವಿದೇಶ

ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ನಗರದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 

ಮುಂಬೈ, ಅ.8: ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ನಗರದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 

1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ಅತಿದೊಡ್ಡ ಏರ್ಪೋರ್ಟ್ ಆಗಲಿದ್ದು ದೇಶದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಹೊರೆಯನ್ನು ಕಡಿಮೆ ಮಾಡಲಿದೆ.

ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಹಾಕಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.

Image

Image

Image

Image

Mumbai News Live Updates: PM Modi Navi Mumbai International Airport, Metro  Line 3 Inauguration News | Check Opening Date, Timings, Location, Map,  Stations List, Route

In Pics | Fully digital, AI terminal: Navi Mumbai International Airport  unveiled

Navi Mumbai, Noida International Airports To Open This Month. See Pictures

Mumbai News Live Updates: PM Modi Navi Mumbai International Airport, Metro  Line 3 Inauguration News | Check Opening Date, Timings, Location, Map,  Stations List, Route

PM Modi to inaugurate Navi Mumbai International Airport on October 8. Key  details - India Today

Navi Mumbai Airport Inauguration: Jaw-dropping photos of India's largest  Greenfield airport project; built at Rs 19,650 crore | Mumbai News - The  Times of India

ಇದು ಭಾರತದ ಅತಿದೊಡ್ಡ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಇದಾಗಿದೆ. ಇದೇ ವೇಳೆ ಪ್ರಧಾನಿ ಮೋದಿ, ಅತ್ರೆ ಚೌಕ್‌ನಿಂದ ಕಫೆ ಪೆರೇಡ್‌ ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಪ್ರಯೋಜನ ನೀಡುವ ಮುಂಬೈ ಒನ್ ಅಪ್ಲಿಕೇಶನ್ ಅನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.

Prime Minister Narendra Modi on Wednesday inaugurated the first phase of the Navi Mumbai International Airport, built at a cost of ₹19,650 crore. Spread across 1,160 hectares, the airport is set to become India’s largest, significantly boosting the nation’s aviation capacity and easing congestion at Mumbai’s Chhatrapati Shivaji Maharaj International Airport.