ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ್ ಶಾಂತಿ ಪ್ರಶಸ್ತಿ ; ಭಾರೀ ಲಾಬಿ ನಡೆಸಿದ್ದ ಡೊನಾಲ್ಡ್ ಟ್ರಂಪ್ ಗೆ ಮುಖಭಂಗ, ನಾರ್ವೆ ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ವಾಗ್ದಾಳಿ 

10-10-25 10:37 pm       HK News Desk   ದೇಶ - ವಿದೇಶ

ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನಿಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಸ್ವಯಂಘೋಷಣೆ ಮಾಡಿಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ.

ನವದೆಹಲಿ, ಅ.10 : ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನಿಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಸ್ವಯಂಘೋಷಣೆ ಮಾಡಿಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ.

ವೆನಿಜುವೆಲಾದಲ್ಲಿ ಮಾರಿಯಾ ಅವರು ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಸುತ್ತ ಕಳೆದ ಬಾರಿ ಅಧ್ಯಕ್ಷೀಯ ಅಭ್ಯರ್ಥಿಯೂ ಆಗಿದ್ದರು. "ಒಂದು ಕಾಲದಲ್ಲಿ ಆಳವಾಗಿ ವಿಭಜಿಸಲ್ಪಟ್ಟಿದ್ದ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಅವರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಇದರೊಂದಿಗೆ ಬಹಳ ಸಮಯದಿಂದ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಕಾಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲಿಗೆ ತೀವ್ರ ನಿರಾಶೆ ಉಂಟು ಮಾಡಿದೆ. ಟ್ರಂಪ್‌ ತನ್ನನ್ನು ತಾನು ನೊಬೆಲ್‌ ಪ್ರಶಸ್ತಿಗೆ ಅರ್ಹ ಎಂದು ಹೇಳಿಕೊಂಡಿದ್ದರ ನಡುವೆಯೂ ನಾರ್ವೇಜಿಯನ್ ನೋಬೆಲ್ ಸಮಿತಿಯು ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ. 

ವಿಶ್ವ ಮಟ್ಟದಲ್ಲಿ ಈ ಹಿಂದೆ ಯಾರೂ ಮಾಡದ ಕೆಲಸ ಮಾಡಿದ್ದು, ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬರಲೇಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಹೇಳಿದ್ದರು. ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ಮಾತುಕತೆ ಮೂಲಕ ಪರಿಹರಿಸಿದ್ದೇನೆ. ಏಳು ಯುದ್ಧಗಳನ್ನು ಅಂತ್ಯಗೊಳಿಸಿದ್ದೇನೆ. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬರಬೇಕು ಎಂದಿದ್ದರು. 

ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈತಪ್ಪಿದ್ದಕ್ಕೆ ಅಮೆರಿಕದ ಶ್ವೇತಭವನ ನಾರ್ವೇಜಿಯನ್ ನೊಬೆಲ್ ಸಮಿತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ನೊಬೆಲ್ ಸಮಿತಿಯು ಶಾಂತಿಗಿಂತ ರಾಜಕೀಯವನ್ನು ಹೆಚ್ಚಾಗಿ ಇಷ್ಟಪಡುತ್ತದೆ ಎಂಬುದನ್ನು ಇದು ಸಾಬೀತುಪಡಿಸಿದೆ" ಎಂದು ಶ್ವೇತಭವನ ಪೋಸ್ಟ್ ಮಾಡಿದೆ. ಇದರ ಹೊರತಾಗಿಯೂ ಟ್ರಂಪ್ ಅವರು ವಿಶ್ವ ರಾಷ್ಟ್ರಗಳಲ್ಲಿ ಶಾಂತಿ ಒಪ್ಪಂದ ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಮುಂದುವರಿಸುತ್ತಾರೆ. ಅವರು ಮಾನವೀಯ ಹೃದಯ ಹೊಂದಿದ್ದಾರೆ ಎಂದು ಹಾಡಿ ಹೊಗಳಿದೆ.

In a major announcement on October 10, 2025, the Norwegian Nobel Committee awarded the Nobel Peace Prize to Venezuelan opposition leader María Corina Machado for her steadfast efforts in promoting democratic rights and leading the push for a peaceful transition from dictatorship to democracy in Venezuela.