ಜೆಡ್ಡಾದಿಂದ ಹೈದರಾಬಾದ್‌ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಬೆದರಿಕೆ ; ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ 

01-11-25 07:27 pm       HK News Desk   ದೇಶ - ವಿದೇಶ

ಜೆಡ್ಡಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ. 

ಹೈದರಾಬಾದ್, ನ.1 : ಜೆಡ್ಡಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ. 

ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಲಾಗಿತ್ತು. ಎಲ್‌ಟಿಟಿಇ- ಐಎಸ್‌ಐ ಉಗ್ರರು 1984ರ ಮದ್ರಾಸ್ ಏರ್‌ಪೋರ್ಟ್ ಬಾಂಬ್ ದಾಳಿ ರೀತಿಯಲ್ಲಿ ಸ್ಪೋಟಕ್ಕೆ ಯೋಜನೆ ಹಾಕಿದ್ದಾರೆ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೌದಿಯ ಜೆಡ್ಡಾದಿಂದ ಬರುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭದ್ರತಾ ತಪಾಸಣೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. 

ಇಂಡಿಗೋ ವಿಮಾನ 6E68 ಗೆ ಬೆದರಿಕೆ ಸಂದೇಶ ಬಂದಿದ್ದು, ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದೆ. ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಸೇರಿದಂತೆ ಅನಾನೂಕೂಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

A bomb threat email claiming that a human bomb was onboard an IndiGo flight from Jeddah to Hyderabad triggered panic early Saturday morning, prompting authorities to divert the aircraft to Mumbai for an emergency inspection.