ಬ್ರೇಕಿಂಗ್ ನ್ಯೂಸ್
26-11-25 07:16 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.26 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನೊಳಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ ಎಂಬುದಾಗಿ ವದಂತಿ ಹರಡಿದ್ದು ಹತ್ಯೆ ಬಗ್ಗೆ ಪಾಕಿಸ್ತಾನದ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಯಾಗಿದೆ. ಇಮ್ರಾನ್ ಹತ್ಯೆ ಕುರಿತಾಗಿ ಅಧಿಕೃತ ಮಾಹಿತಿ ಲಭ್ಯವಿಲ್ಲವಾದರೂ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಹರಿದಾಡುತ್ತಿವೆ.
ಬಲೂಚಿಸ್ತಾನ್ ಹೆಸರಲ್ಲಿ ಗುರುತಿಸಿಕೊಂಡಿರುವ ಎಕ್ಸ್ ಖಾತೆಯಲ್ಲಿ 'ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತು ಗುಪ್ತಚರ ಸಂಸ್ಥೆ ಐಎಸ್‌ಐ ಸಂಚು ರೂಪಿಸಿ ಇಮ್ರಾನ್ ಅವರನ್ನು ಕೊಲೆಗೈದಿದೆ' ಎಂದು ಆರೋಪಿಸಿದೆ. ಈ ಮಾಹಿತಿ ನಿಜವೆಂದು ದೃಢಪಟ್ಟರೆ, 'ಭಯೋತ್ಪಾದಕ ರಾಷ್ಟ್ರ' ಪಾಕಿಸ್ತಾನದ ಅಂತ್ಯವನ್ನು ಸೂಚಿಸುತ್ತದೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.
ಇಮ್ರಾನ್ ಖಾನ್ ಹತ್ಯೆ ವದಂತಿ ಹರಡಿದ ಹಿನ್ನೆಲೆಯಲ್ಲಿ ಜೈಲಿನ ಹೊರಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಸೋದರಿಯರಾದ ನೊರೀನ್ ಖಾನ್, ಅಲೀಮಾ ಖಾನ್ ಮತ್ತು ಉಜ್ಮಾ ಖಾನ್ ಅವರು ಸೋದರ ಇಮ್ರಾನ್ ಅವರನ್ನು ಭೇಟಿಯಾಗಲು ಯತ್ನಿಸಿದ್ದು ಅವರಿಗೆ ಜೈಲಿನ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಸಹೋದರಿಯರು ಆರೋಪಿಸಿದ್ದಾರೆ. ಇದಲ್ಲದೆ, ಪಿಟಿಐ ನಾಯಕರಾದ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಸೊಹೈಲ್ ಅಫ್ರಿದಿ ಅವರಿಗೂ ಜೈಲು ಭೇಟಿಗೆ ಅನುಮತಿ ನಿರಾಕರಿಸಿದ್ದಾರೆ.
ಆಗಸ್ಟ್ 2023 ರಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರನ್ನು ಸಾರ್ವಜನಿಕ ಭೇಟಿಗಳಿಂದ ದೂರವಿಡಲಾಗಿದ್ದು, ಆರೋಗ್ಯ ಸ್ಥಿತಿಯ ಬಗ್ಗೆಯೂ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುತ್ತಿಲ್ಲ. ಇದರಿಂದಾಗಿ ಹತ್ಯೆಯ ಕುರಿತ ಅನುಮಾನಗಳನ್ನು ಹುಟ್ಟಿಸಿದ್ದು ಗಂಭೀರ ಆರೋಪಗಳನ್ನೇಳುವಂತೆ ಮಾಡಿದೆ.
A shocking rumor has gone viral on Pakistani and Afghan social media alleging that former Pakistan Prime Minister Imran Khan has been tortured and killed inside Rawalpindi’s Adiala Jail. Although no official confirmation has been released, social platforms are flooded with claims accusing Pakistan Army Chief General Asim Munir and the ISI of plotting his murder.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am