ಬ್ರೇಕಿಂಗ್ ನ್ಯೂಸ್
11-12-25 02:09 pm HK News Desk ದೇಶ - ವಿದೇಶ
ನವದೆಹಲಿ, ಡಿ.11 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ "ಪಾಯಿಂಟ್ ಆಫ್ ಕಾಲ್" ಸ್ಥಾನಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ ಒಟ್ಟು ಸುಮಾರು 23.4 ಲಕ್ಷ ಪ್ರಯಾಣಿಕರ ಪ್ರಯಾಣವನ್ನು ನಿರ್ವಹಿಸಿದ್ದು, ಆ ಮೂಲಕ ಸುಮಾರು 16,800ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಿವೆ. ಇದು ವಾರ್ಷಿಕವಾಗಿ ಶೇ.15ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ದಾಖಲಿಸಿದೆ. ಈ ಅಂಕಿ-ಅಂಶಗಳು ವಿಮಾನ ನಿಲ್ದಾಣದ ಬೆಳವಣಿಗೆ ಮತ್ತು ವಾಣಿಜ್ಯ ಉತ್ತೇಜನದ ಪ್ರಾಮುಖ್ಯತೆಯನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತವೆ ಎಂದು ಹೇಳಿದ್ದಾರೆ.
ತುಳುನಾಡು ಪ್ರದೇಶಗಳ ಗಣನೀಯ ಸಂಖ್ಯೆಯ ಜನರು ಗಲ್ಫ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಔದ್ಯೋಗಿಕ ಸಮುದಾಯವು ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಮಂಗಳೂರು ವಿಮಾನ ನಿಲ್ದಾಣವನ್ನೇ ಹೆಚ್ಚು ಅವಲಂಬಿಸಿದೆ. ಆದರೆ, PoC (ಪಾಯಿಂಟ್ ಆಫ್ ಕಾಲ್) ಸ್ಥಾನಮಾನದ ಕೊರತೆಯಿಂದಾಗಿ ವಿದೇಶಿ ವಿಮಾನಯಾನ ಸಂಸ್ಥೆಗಳು ಇಲ್ಲಿಂದ ನೇರ ಅಂತಾರಾಷ್ಟ್ರೀಯ ಸೇವೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ, ಪ್ರಯಾಣಿಕರು ಬೆಂಗಳೂರು ಅಥವಾ ಕೊಚ್ಚಿನ್ ವಿಮಾನ ನಿಲ್ದಾಣದ ಮೂಲಕ ಸಂಚರಿಸಬೇಕಾದ ಪರಿಸ್ಥಿತಿಯಿದೆ. ಇದರಿಂದ, ಅನಿವಾಸಿ ಭಾರತೀಯ ಸಮುದಾಯಕ್ಕೆ ದುಬಾರಿ ವೆಚ್ಚ, ದೀರ್ಘ ಪ್ರಯಾಣದ ಜತೆಗೆ ನಾನಾ ರೀತಿಯ ಅನಾನುಕೂಲತೆ ಎದುರಾಗುತ್ತಿದೆ ಎಂದು ಅವರು ಸದನದ ಗಮನಕ್ಕೆ ತಂದಿದ್ದಾರೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ PoC ಸ್ಥಾನಮಾನ ನೀಡುವುದರಿಂದ ಈ ಭಾಗದ ಜನರಿಗೆ ನೇರ ಅಂತಾರಾಷ್ಟ್ರೀಯ ಸಂಪರ್ಕ ಸಾಧ್ಯವಾಗುತ್ತದೆ. ಜತೆಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಅನುಕೂಲವಾಗುತ್ತದೆ. ಇದರಿಂದ ಸಹಜವಾಗಿಯೇ ಇಲ್ಲಿನ ವ್ಯಾಪಾರ ಮತ್ತು ಹೂಡಿಕೆ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ. ಇದು ಸಾಗರೋತ್ತರ ಉತ್ಪನ್ನಗಳ ರಫ್ತು, ಅಡಿಕೆ, ಗೋಡಂಬಿ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ಸ್ ನಂತಹ ಪ್ರಾದೇಶಿಕ ಉದ್ಯಮಗಳಿಗೂ ಉತ್ತೇಜನ ನೀಡುತ್ತದೆ. ಜೊತೆಗೆ ಮಂಗಳೂರು ವಿಶೇಷ ಆರ್ಥಿಕ ವಲಯದ ಬೆಳವಣಿಗೆಗೂ ಪೂರಕವಾಗಲಿದೆ ಎಂದು ಕ್ಯಾ. ಚೌಟ ಸದನಕ್ಕೆ ಮನವರಿಕೆ ಮಾಡಿದರು.
ನಾಗರಿಕ ವಿಮಾನಯಾನ ಸಚಿವರು ಕೂಡಲೇ ಮಧ್ಯಪ್ರವೇಶ ಮಾಡಿ, ಈ ಭಾಗದ ಪ್ರಯಾಣಿಕರ ಬೇಡಿಕೆ, ಪ್ರಾದೇಶಿಕ ಮಹತ್ವವನ್ನು ಪರಿಗಣಿಸಿ ಆದಷ್ಟು ಬೇಗ ಈ ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಮಾನ್ಯತೆಯನ್ನು ನೀಡಬೇಕು. ಸಮತೋಲಿತ ಅಭಿವೃದ್ಧಿ ಮತ್ತು ಜಾಗತಿಕ ಸಂಪರ್ಕ ವ್ಯವಸ್ಥೆ ಸುಧಾರಣೆ ಹಿತದೃಷ್ಟಿಯಿಂದಲೂ ಮಂಗಳೂರು ವಿಮಾನ ನಿಲ್ದಾಣಕ್ಕೆ ಈ "ಪಾಯಿಂಟ್ ಆಫ್ ಕಾಲ್" (PoC) ಸ್ಥಾನಮಾನವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.
Dakshina Kannada MP Brijesh Chowta has urged the Union Government in Parliament to urgently grant “Point of Call (PoC)” status to Mangaluru International Airport to enable foreign airlines to operate direct international flights from the city.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್‌ಪೋರ್ಟ್‌ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am