ಬ್ರೇಕಿಂಗ್ ನ್ಯೂಸ್
24-12-25 07:38 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.24 : ಅಯೋಧ್ಯೆ ರಾಮನ ಮಂದಿರಕ್ಕೆ ಭವ್ಯವಾದ ಚಿನ್ನದ ವರ್ಣದ ರಾಮನ ಪ್ರತಿಮೆಯನ್ನು ಕರ್ನಾಟಕ ಮೂಲದ ಉದ್ಯಮಿಯೊಬ್ಬರು ದಾನ ನೀಡಿದ್ದಾರೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆ ಕೆಲವೇ ದಿನಗಳಲ್ಲಿ ಅಯೋಧ್ಯೆ ಅಂಗಳದಲ್ಲಿ ಎದ್ದು ನಿಲ್ಲಲಿದೆ.
ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದವರಾಗಿದ್ದು ತಮ್ಮ ಹೆಸರನ್ನು ತಿಳಿಸದೆ ಉದ್ಯಮಿ ರಾಮನ ಮೂರ್ತಿಯನ್ನು ಅರ್ಪಿಸಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ ಹೇಳಿದ್ದಾರೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲಾ ಶೈಲಿಯಲ್ಲಿ ರಚಿಸಲಾದ ಪ್ರತಿಮೆಯ ಮೌಲ್ಯ ಅಂದಾಜು 25-30 ಕೋಟಿ ರೂ. ಆಗಬಹುದು ಎನ್ನಲಾಗಿದೆ. ಅಂದಾಜಿನ ಪ್ರಕಾರ ಇದರ ತೂಕ ಐದು ಕ್ವಿಂಟಾಲ್‌ನಷ್ಟಿರಬಹುದು ಎನ್ನಲಾಗಿದೆ. ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ತಂಜಾವೂರಿನ ನುರಿತ ಕುಶಲಕರ್ಮಿಗಳು ಮೂರ್ತಿಯ ಕೆತ್ತನೆಯನ್ನು ಮಾಡಿದ್ದು, ಕಲಾತ್ಮಕ ನೋಟವನ್ನು ನೀಡಿದ್ದಾರೆ. ರಾಮನ ಮೂರ್ತಿ ವಜ್ರಗಳು, ಪಚ್ಚೆಗಳು, ನೀಲಮಣಿಗಳು ಮತ್ತು ಚಿನ್ನದಿಂದ ಕೂಡಿದ್ದು, ಬಳಸಿದ ನಿಖರವಾದ ಲೋಹವನ್ನು ತಜ್ಞರು ಗುರುತಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದೇ ಡಿಸೆಂಬರ್ 29ರಿಂದ 2026ರ ಜನವರಿ 2ರ ವರೆಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವ ನಡೆಯಲಿದ್ದು ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ.
ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಮೂರ್ತಿಯನ್ನು ಅನಾವರಣಗೊಳಿಸಲಾಗುವುದು, ನಂತರ ದೇಶಾದ್ಯಂತ ಸಂತರು ಮತ್ತು ಮಹಾಂತರು ಭಾಗವಹಿಸುವ ಪವಿತ್ರೀಕರಣ ಸಮಾರಂಭ ನಡೆಯಲಿದೆ.
A Karnataka-based industrialist has anonymously donated a magnificent Rama idol worth an estimated ₹25–30 crore to the Ayodhya Ram Temple. The 10-foot-tall, 8-foot-wide golden idol is adorned with diamonds, emeralds, sapphires and other precious stones, crafted in traditional South Indian style by master artisans from Thanjavur. The idol, weighing nearly five quintals, is expected to be installed near Angad Teela ahead of the second anniversary celebrations of the Ram Lalla Pran Pratishta from December 29 to January 2. The Ram Janmabhoomi Teerth Kshetra Trust will soon reveal further details.
24-12-25 04:07 pm
Bangalore Correspondent
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
24-12-25 07:38 pm
HK News Desk
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
24-12-25 06:07 pm
Mangalore Correspondent
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm