ಬ್ರೇಕಿಂಗ್ ನ್ಯೂಸ್
07-01-26 09:37 pm HK News Desk ದೇಶ - ವಿದೇಶ
ಮುಂಬೈ, ಜ.7 : ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿಂಧೆ ಬಣದ ಶಿವಸೇನೆ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದರೂ, ಅಚ್ಚರಿಯ ಬೆಳವಣಿಗೆಯಲ್ಲಿ ನಗರಸಭೆಯೊಂದರ ಅಧಿಕಾರ ಪಡೆಯಲು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ದೂರವಿರಿಸಿ ಬಿಜೆಪಿ, ಕಾಂಗ್ರೆಸ್ ಜೊತೆ ಸೇರಿ ಅಧಿಕಾರ ಹಿಡಿದಿದೆ.
ಮಹಾರಾಷ್ಟ್ರದ ಅಂಬರ್ನಾಥ್ ನಗರಸಭೆಯಲ್ಲಿ ಬಿಜೆಪಿ ಸದಸ್ಯೆ ತೇಜಶ್ರೀ ಕರಂಜುಲೆ ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಬಿಜೆಪಿಯ 16, ಕಾಂಗ್ರೆಸ್‌ನ 12 ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಪಕ್ಷದ ನಾಲ್ವರು ಸದಸ್ಯರ ಬೆಂಬಲವನ್ನು ಇವರ ಮೈತ್ರಿಕೂಟ ಹೊಂದಿದ್ದು, ನಗರಸಭೆಯಲ್ಲಿ ಎದುರಾಳಿ ಶಿಂಧೆ ಬಣದ ಎದುರು ಬಹುಮತ ಸಾಧಿಸಿದೆ.
ಡಿಸೆಂಬರ್ 20ರಂದು 60 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷವು ಅತಿ ಹೆಚ್ಚು 27 ಸ್ಥಾನಗಳನ್ನು ಗೆದ್ದುಕೊಂಡಿದ್ದರೂ ಬಹುಮತಕ್ಕೆ 4 ಸ್ಥಾನಗಳ ಕೊರತೆಯಿತ್ತು. ಅಧಿಕೃತ ಮೈತ್ರಿ ಪಕ್ಷ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಫಲಿತಾಂಶ ಪಡೆದಿತ್ತು. ಆದರೆ ಮೇಯರ್ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡಬೇಕೆಂಬ ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ.
ಅಂಬರ್ನಾಥ್ ವಿಕಾಸ್ ಅಘಾಡಿ ಹೆಸರಿನಲ್ಲಿ ಮೂರು ಪಕ್ಷಗಳು ಅಧಿಕಾರಕ್ಕಾಗಿ ಒಂದಾಗಿರುವುದು ಸ್ಪಷ್ಟವಾಗಿದೆ. ಈ ಮೈತ್ರಿಕೂಟಕ್ಕೆ ಯಾವುದೇ ಔಪಚಾರಿಕ ಸಮ್ಮತಿ ಇಲ್ಲ ಎಂದು ಕಾಂಗ್ರೆಸ್ ರಾಜ್ಯ ನಾಯಕತ್ವ ಹೇಳಿದರೆ, ಇವು ಸ್ಥಳೀಯ ಚುನಾವಣೆಗಳಾಗಿದ್ದು ಸ್ಥಳೀಯ ನಾಯಕರಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ.
ಶಿಂಧೆ ಬಣದ ಶಾಸಕ ಬಾಲಾಜಿ ಕಿನಿಕರ್ ಅವರು ಈ ಮೈತ್ರಿಕೂಟವನ್ನು ಅಪವಿತ್ರ ಮೈತ್ರಿ ಎಂದು ಕರೆದಿದ್ದು ಬಿಜೆಪಿ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ದೇಶಾದ್ಯಂತ ಕಾಂಗ್ರೆಸ್ ಮುಕ್ತಗೊಳಿಸುವ ಬಗ್ಗೆ ಮಾತನಾಡುತ್ತಿದೆ. ಆದರೆ ಇಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಸೇರಿದ್ದು ಶಿವಸೇನೆಯ ಬೆನ್ನಿಗೆ ಚೂರಿ ಹಾಕಿದೆ ಎಂದು ದೂರಿದ್ದಾರೆ.
In a surprising political development, the BJP has joined hands with the Congress—instead of ally Shinde-led Shiv Sena—to capture power in a Maharashtra municipal council. This happened despite the BJP–Shinde faction coalition ruling the state together.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am