ಬ್ರೇಕಿಂಗ್ ನ್ಯೂಸ್
17-01-26 03:08 pm HK News Desk ದೇಶ - ವಿದೇಶ
ಕಾಸರಗೋಡು, ಜ.17 : ಹಣಕ್ಕಾಗಿ 72 ವರ್ಷದ ವೃದ್ಧ ಮಹಿಳೆಯನ್ನು ಕೊಲೆಗೈದು ಕರಿಮಣಿ ಸರ ಎಗರಿಸಿದ ಪ್ರಕರಣ ನಡೆದಿದ್ದು ಕುಂಬಳೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಮೊವ್ವಾರ್ ಎಂಬಲ್ಲಿ 72 ವರ್ಷದ ಪುಷ್ಪಲತಾ ಶೆಟ್ಟಿ ಎಂಬ ಮಹಿಳೆಯ ಕೊಲೆ ನಡೆದಿತ್ತು. ಬದಿಯಡ್ಕ ಪೆರ್ಡಾಲ ನಿವಾಸಿ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ (47) ಬಂಧಿತ ಆರೋಪಿ.
ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಮೊವ್ವಾರ್ ಗ್ರಾಮದ ಅಜಿಲದಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ತನ್ನ ಮನೆಯಲ್ಲಿ ವಾಸಿಸುತ್ತಿದ್ದರು. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಎಂದು ಶಂಕಿಸಿದ್ದರು. ಶುಕ್ರವಾರ ಮಧ್ಯಾಹ್ನ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ, ಉಸಿರುಗಟ್ಟಿಸಿ ಸಾವನ್ನಪ್ಪಿದ್ದಾಗಿ ಪತ್ತೆಯಾಗಿತ್ತು.
ಪ್ರಕರಣ ದಾಖಲಿಸಿದ ಪೊಲೀಸರು ಅಪರಾಧ ನಡೆದ ಸಮಯದಲ್ಲಿ ಅಲ್ಲಿನ ಪರಿಸರಕ್ಕೆ ಬಂದಿದ್ದ ಜನರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ರಮೇಶ್ ನಾಯಕ್ ಅದೇ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದುದನ್ನು ಕೆಲವರು ನೋಡಿದ್ದರು. ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ, ಮೈಮೇಲೆ ಗಾಯಗಳಿರುವುದು ಪತ್ತೆಯಾಗಿತ್ತು. ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ಬಳಿಕ ಬೆಂಡೆತ್ತಿದಾಗ ಆರೋಪಿ ಕೊಲೆ ಮಾಡಿದ್ದನ್ನು ಬಾಯಿಬಿಟ್ಟಿದ್ದಾನೆ.
ಆರೋಪಿ ರಮೇಶ್ ನಾಯಕ್ ಆರ್ಥಿಕ ಸಮಸ್ಯೆ ಹೊಂದಿದ್ದು 8 ಲಕ್ಷದಷ್ಟು ಸಾಲ ಹೊಂದಿದ್ದ. ಮನೆ ಕಟ್ಟಲು ಭೂಮಿ ಖರೀದಿಸಲು ಸಾಲ ಪಡೆದಿದ್ದ. ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಲು ಪ್ರಯತ್ನಿಸಿದ್ದ. ಆದರೆ, ಈ ವೇಳೆ ಮಹಿಳೆ ವಿರೋಧಿಸಿ ಜಟಾಪಟಿ ನಡೆಸಿದ್ದು, ಈ ವೇಳೆ ಆಕೆಯ ಕತ್ತು ಹಿಸುಕಿ ಕೊಂದಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸುಮಾರು 28 ಗ್ರಾಂ ತೂಕದ ಕರಿಮಣಿಯನ್ನು ಕದ್ದೊಯ್ದಿದ್ದು ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ.
In a shocking incident in Kasaragod district, a 72-year-old woman was strangled to death for her mangalsutra. The accused, who had come to the area to cut grass, committed the murder due to financial distress. Kumbla police arrested the suspect and recovered the stolen gold chain.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am