ಬ್ರೇಕಿಂಗ್ ನ್ಯೂಸ್
31-01-26 09:38 pm HK News Desk ದೇಶ - ವಿದೇಶ
ಚೆನ್ನೈ, ಜ.31 : ತಮಿಳುನಾಡಿನ ಕಡಲೂರು ಜಿಲ್ಲೆಯ ಕಡಂಪುಲಿಯೂರು ಗ್ರಾಮದಲ್ಲಿ ಭೀಕರ ಹತ್ಯೆ ನಡೆದಿದ್ದು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವನನ್ನೇ ಸೊಸೆಯ ಪ್ರಿಯಕರ ಜೀವಂತ ಸುಟ್ಟು ಹಾಕಿದ್ದಾನೆ.
ಮಾಲಿಗಂಪಟ್ಟು ಗ್ರಾಮದ ನಿವಾಸಿ 70 ವರ್ಷದ ರೈತ ರಾಜೇಂದ್ರನ್ ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಹೋಗಿದ್ದಾರೆ. ರಾಜೇಂದ್ರನ್ ಅವರನ್ನು ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಜೊತೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವ್ಯಾನ್ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಅಪಾಯವನ್ನು ಅರಿತ ಕಂದನ್ ಸ್ಥಳದಿಂದ ಪರಾರಿಯಾಗಿದ್ದು, ಒಂಟಿಯಾದ ರಾಜೇಂದ್ರನ್ ಮೇಲೆ ದಾಳಿ ನಡೆಸಿದ ಆರೋಪಿಗಳು ಅವರ ಮೈಮೇಲೆ ಪೆಟ್ರೋಲ್ ಸುರಿದು ಜೀವಂತವಾಗಿ ಬೆಂಕಿ ಹಚ್ಚಿ ಸುಟ್ಟಿದ್ದಾರೆ.
ಬೆಂಕಿಯ ಜ್ವಾಲೆಯಲ್ಲಿ ರಾಜೇಂದ್ರನ್ ನಡು ರಸ್ತೆಯಲ್ಲೇ ಓಡುತ್ತಾ ಸಹಾಯಕ್ಕಾಗಿ ಕಿರುಚಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೋಡುಗರ ಎದೆ ನಡುಗಿಸುವಂತಿವೆ. ಹೃದಯವಿದ್ರಾವಕ ಘಟನೆಯ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.
ಪ್ರಾಥಮಿಕ ತನಿಖೆಯಲ್ಲಿ, ಈ ಹತ್ಯೆಗೆ ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರನ್ ಅವರ ಸೊಸೆಯೊಂದಿಗೆ ಮಣಿಕಂಠನ್ ಎಂಬ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದನೆಂಬ ಆರೋಪಗಳಿವೆ. ಇದನ್ನು ರಾಜೇಂದ್ರನ್ ತೀವ್ರವಾಗಿ ವಿರೋಧಿಸಿದ್ದರಿಂದಲೇ ದ್ವೇಷ ಸಾಧಿಸಲು ಮಣಿಕಂಠನ್ ತನ್ನ ಸಹಚರರೊಂದಿಗೆ ಭೀಕರವಾಗಿ ಕೊಲೆ ಮಾಡಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಮಣಿಕಂಠನ್, ಅವನ ಸಹಚರರು ಹಾಗೂ ರಾಜೇಂದ್ರನ್ ಅವರ ಸೊಸೆ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
A 70-year-old farmer was allegedly burnt to death in a shocking incident reported from Kadampuliyur village in Tamil Nadu’s Cuddalore district. Police have arrested four persons, including the victim’s daughter-in-law and her alleged partner, in connection with the case.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am