ಬ್ರೇಕಿಂಗ್ ನ್ಯೂಸ್
04-02-26 03:42 pm HK News Desk ದೇಶ - ವಿದೇಶ
ಚೆನ್ನೈ, ಫೆ.4 : ತಮಿಳುನಾಡು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಫೈರ್ ಬ್ರಾಂಡ್ ಅಣ್ಣಾಮಲೈ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ಸೀಮಿತಗೊಳಿಸಿದ್ದಕ್ಕೆ ಬೇಸರಗೊಂಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆಯ ಅನಾರೋಗ್ಯದ ನೆಪವೊಡ್ಡಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.
ವಯೋವೃದ್ಧ ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಿದ್ದು ಚುನಾವಣಾ ಉಸ್ತುವಾರಿ ಕೆಲಸದ ಜವಾಬ್ದಾರಿ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ. ತಂದೆ ಅಸ್ವಸ್ಥರಾಗಿದ್ದು ಅವರನ್ನು ನೋಡಿಕೊಳ್ಳಬೇಕು. ಚುನಾವಣಾ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೈಕಮಾಂಡ್ಗೆ ತಿಳಿಸಿದ್ದೇನೆ. ತಂದೆಯನ್ನು ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೇವಲ 6 ಸ್ಥಾನಗಳಿಗೆ ಸೀಮಿತಗೊಳಿಸಿದ್ದಕ್ಕಾಗಿ ಕೇಂದ್ರ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಬಳಿಕ ಬಿಜೆಪಿಯಲ್ಲಿ ಅವರು ಮೂಲೆಗುಂಪಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ನೀಡಲಾಗುವುದೆಂದು ಹೇಳಲಾಗಿದ್ದರೂ ಅದನ್ನೂ ಮಾಡಿಲ್ಲ. ರಾಜ್ಯ ಘಟಕ ಆಯೋಜಿಸುವ ಕಾರ್ಯಕ್ರಮಗಳಿಂದಲೂ ಅಣ್ಣಾಮಲೈ ದೂರ ಉಳಿದಿದ್ದರು. ಬಿಜೆಪಿ ಎಐಎಡಿಎಂಕೆ ಜೊತೆ ವ್ಯವಹರಿಸುತ್ತಿರುವ ರೀತಿ ಬಗ್ಗೆಯೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.
ತಮಿಳುನಾಡು ಬಿಜೆಪಿಯ ಅತ್ಯಂತ ಜನಪ್ರಿಯ ನಾಯಕರಾಗಿರುವ ಅಣ್ಣಾಮಲೈ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಹುತೇಕ ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಎಐಎಡಿಎಂಕೆ ಬಗ್ಗೆ ಬಿಜೆಪಿ ನಾಯಕರು ಮೃದು ಧೋರಣೆ ಹೊಂದಿರುವುದು ಅಣ್ಣಾಮಲೈಗೆ ಸರಿ ಹೊಂದುತ್ತಿಲ್ಲ. ಎರಡೂ ದ್ರಾವಿಡ ಪಕ್ಷಗಳನ್ನ ಎದುರಿಸುತ್ತ ಬಂದಿರುವ ಅಣ್ಣಾಮಲೈ ಈಗ ತಮಗಿಂತ ಹೆಚ್ಚು ಜನಪ್ರಿಯರಾಗುತ್ತಿರುವುದು ಆ ಪಕ್ಷಗಳ ನಾಯಕರನ್ನು ಚಿಂತೆಗೀಡು ಮಾಡಿದೆ. ಎಐಎಡಿಎಂಕೆ ಪಕ್ಷದಲ್ಲಿ ಜನಪ್ರಿಯ ನಾಯಕರು ಇಲ್ಲದೇ ಇರುವುದರಿಂದ ಬಹುಮತ ಬಂದರೆ ಅಣ್ಣಾಮಲೈ ಕೈಮೇಲಾಗುತ್ತದೆಂಬ ಭಾವನೆ ಸ್ಥಳೀಯ ಪಕ್ಷಗಳಲ್ಲಿದೆ.
ತಮಿಳುನಾಡಿನಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಬಹುತೇಕ ಬಿಜೆಪಿ- ಎಐಎಡಿಎಂಕೆ ಮೈತ್ರಿಕೂಟ ಬಹುಮತ ಸಾಧಿಸುವ ಸಾಧ್ಯತೆ ಇದೆ. ಆದರೆ ಎಐಎಡಿಎಂಕೆ ಬೇಡಿಕೆಯಂತೆ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಿದ ಅಣ್ಣಾಮಲೈ ಅವರನ್ನೀಗ ಪೂರ್ತಿ ಮೂಲೆಗುಂಪು ಮಾಡಲು ಹುನ್ನಾರ ನಡೆದಿದೆ. ಮೋದಿ- ಷಾ ಜೋಡಿಗೆ ಅಣ್ಣಾಮಲೈ ಪ್ರಭಾವ ತಿಳಿದಿದ್ದರೂ, ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎನ್ನುವ ನೆಲೆಯಲ್ಲಿ ಸ್ಥಳೀಯ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುವ ಸ್ಥಿತಿಯಾಗಿದೆ.
responsibilities, citing his father’s ill health. Reports suggest he was unhappy over being limited to overseeing just six constituencies ahead of the Assembly polls. The development has sparked political debate amid BJP’s alliance with AIADMK.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am