ಬ್ರೇಕಿಂಗ್ ನ್ಯೂಸ್
19-02-26 10:10 pm mangalore ದೇಶ - ವಿದೇಶ
ನವದೆಹಲಿ, ಫೆ.19 ರಾಜಕೀಯದಲ್ಲಿ 'ಉಚಿತ ಕೊಡುಗೆ' (ಫ್ರೀಬೀಸ್) ಸಂಸ್ಕೃತಿ ಹೆಚ್ಚುತ್ತಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ರಾಜಕೀಯ ಪಕ್ಷಗಳು ಪುನರ್ವಿಮರ್ಶೆ ಮಾಡಬೇಕು ಎಂದು ಸಲಹೆ ಮಾಡಿದೆ.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸಲು ಮುಂದಾಗಿರುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮ ಲಿಮಿಟೆಡ್‌ನ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಯಗಳು ಬಡವರನ್ನು ಬೆಂಬಲಿಸುವುದರಲ್ಲಿ ಅರ್ಥವಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡುತ್ತೇವೆ ಎನ್ನುವುದಕ್ಕೆ ಸಮರ್ಥನೆ ಇಲ್ಲ ಎಂದು ಹೇಳಿದೆ.
"ದೇಶದ ಹೆಚ್ಚಿನ ರಾಜ್ಯಗಳು ಆದಾಯ ಕೊರತೆಯನ್ನು ಎದುರಿಸುತ್ತಿದೆ. ಆದರೂ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಕೊಡುಗೆಗಳನ್ನು ನೀಡುತ್ತಿವೆ" ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ರೀತಿಯ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಮತ್ತು ರಾಜ್ಯ ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್‌ಗಳು, ವಿದ್ಯುತ್ ನೀಡುವ ಬದಲು ಉದ್ಯೋಗ ಒದಗಿಸುವ ಮಾರ್ಗಗಳನ್ನು ಹುಡುಕಬೇಕು ಎಂದು ಪೀಠ ಸಲಹೆ ಮಾಡಿದೆ.
ಆದಾಗ್ಯೂ, ಉಚಿತ ವಿದ್ಯುತ್ ಒದಗಿಸಲು ಪ್ರಸ್ತಾಪಿಸಿರುವ ಡಿಎಂಕೆ ಸರ್ಕಾರದ ನೇತೃತ್ವದ ವಿದ್ಯುತ್ ವಿತರಣಾ ಸಂಸ್ಥೆಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
"ಭಾರತದಲ್ಲಿ ನಾವು ಯಾವ ರೀತಿಯ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಪೀಠವು, "ರಾಜ್ಯಗಳು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ನೀವು ಬೆಳಗ್ಗೆಯಿಂದ ಸಂಜೆಯ ವರೆಗೆ ಉಚಿತ ಆಹಾರ, ಉಚಿತ ಸೈಕಲ್, ನಂತರ ಉಚಿತ ವಿದ್ಯುತ್ ನೀಡಲು ಪ್ರಾರಂಭಿಸಿದರೆ ಯಾರು ಕೆಲಸ ಮಾಡುತ್ತಾರೆ ಮತ್ತು ಜನರಲ್ಲಿ ಕೆಲಸ ಮಾಡುವ ಮನೋಭಾವ ಕಡಿಮೆಯಾಗುತ್ತದೆ ಅಲ್ಲವೇ ಎಂದು ಸಿಜೆಐ ಪ್ರಶ್ನಿಸಿದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am