ಬ್ರೇಕಿಂಗ್ ನ್ಯೂಸ್
23-02-26 04:45 pm HK News Desk ದೇಶ - ವಿದೇಶ
ಕಠ್ಮಂಡು, ಫೆ 23: ನೇಪಾಳದ ರಾಜಧಾನಿ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ದಾಡಿಂಗ್ ಜಿಲ್ಲೆಯ ಗಜುರಿ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಪ್ರಯಾಣಿಕ ಬಸ್ ಇಂದು ಬೆಳಗಿನ ಜಾವ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ ಬಸ್‌ನಲ್ಲಿದ್ದ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಜುರಿ ಸಮೀಪದ ಭೈಸೆಪತಿ ಪ್ರದೇಶದ ಬಳಿ ಬಸ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದೆ. ವಾಹನವು ರಸ್ತೆ ಬದಿಯಿಂದ ಜಾರಿ ಸುಮಾರು 300 ಮೀಟರ್ ಇಳಿಜಾರಿನಲ್ಲಿ ಉರುಳಿ ತ್ರಿಶೂಲಿ ನದಿ ದಡದಲ್ಲಿ ಬಿದ್ದಿದೆ. ಅಪಘಾತದಿಂದ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಕುರಿತು ಮಾಹಿತಿ ನೀಡಿದ ನೇಪಾಳ ಸಶಸ್ತ್ರ ಪೊಲೀಸ್ ಪಡೆ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ, ಸ್ಥಳದಿಂದ 18 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಸ್‌ನಿಂದ 28 ಗಾಯಾಳು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನೇಪಾಳ ಸೇನೆ ಮತ್ತು ಸ್ಥಳೀಯ ಪೊಲೀಸ್ ಪಡೆಗಳು ಪಾಲ್ಗೊಂಡಿವೆ ಎಂದಿದ್ದಾರೆ.
ಅಪಘಾತದಲ್ಲಿ ನ್ಯೂಜಿಲೆಂಡ್‌ನ ಪುರುಷ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಜಪಾನ್‌ನ ಮಹಿಳೆ ಹಾಗೂ ನೆದರ್‌ಲ್ಯಾಂಡ್ಸ್‌ನ ಪ್ರಜೆ ಸೇರಿದ್ದಾರೆ. ಬಸ್‌ನಲ್ಲಿ ಸುಮಾರು 40 ರಿಂದ 45 ಪ್ರಯಾಣಿಕರು ಇದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ದೃಢವಾಗಿಲ್ಲ. ಆದರೆ ಚಾಲಕನ ಅತಿವೇಗದ ಚಾಲನೆ ಅಥವಾ ರಸ್ತೆ ಪರಿಸ್ಥಿತಿ ಕಳಪೆಯಾಗಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.
ರಾತ್ರಿಯ ಸಮಯದಲ್ಲಿ ಅಪಘಾತ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಸವಾಲು ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ಮುಂದುವರಿದಿದೆ. ಈ ದುರಂತವು ನೇಪಾಳದಲ್ಲಿ ಮತ್ತೆ ರಸ್ತೆ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am