ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am