ಬ್ರೇಕಿಂಗ್ ನ್ಯೂಸ್
27-02-26 03:55 pm HK News Staffer ದೇಶ - ವಿದೇಶ
ನವದೆಹಲಿ, ಫೆ.27: ಮಹತ್ವದ ಬೆಳವಣಿಗೆಯಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಿದ್ದ ಎಲ್ಲ 23 ಮಂದಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕೇವಲ ಊಹೆಗಳ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಅಬಕಾರಿ ನೀತಿ ರೂಪಿಸುವಲ್ಲಿ ಯಾವುದೇ ಕ್ರಿಮಿನಲ್ ಪಿತೂರಿ ಅಥವಾ ದುರುದ್ದೇಶ ಸಿಬಿಐ ಆರೋಪ ಪಟ್ಟಿಯಲ್ಲಿ ಕಂಡುಬಂದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದರೊಂದಿಗೆ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮಾತ್ರವಲ್ಲದೆ, ಬಿಆರ್ಎಸ್ ನಾಯಕಿ ಕೆ. ಕವಿತಾ, ವಿಜಯ್ ನಾಯರ್ ಸೇರಿದಂತೆ ದೋಷಾರೋಪ ಪಟ್ಟಿಯಲ್ಲಿದ್ದ ಎಲ್ಲರಿಗೂ ಈ ಮೂಲಕ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದ್ದಲ್ಲದೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ಸಿಬಿಐ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ನಾನು ಭ್ರಷ್ಟನಲ್ಲ, ಅತಿದೊಡ್ಡ ಪಿತೂರಿ ; ಕೇಜ್ರಿವಾಲ್:
ತೀರ್ಪು ಹೊರಬಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾವುಕರಾಗಿ ಕಣ್ಣೀರಿಟ್ಟರು. "ನಾನು ಭ್ರಷ್ಟನಲ್ಲ. ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಾಮಾಣಿಕರು (ಕಟ್ಟರ್ ಇಮಂದಾರ್) ಎಂದು ಇಂದು ನ್ಯಾಯಾಲಯವೇ ಸಾಬೀತುಪಡಿಸಿದೆ. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ನಡೆದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಅವರು ಹೇಳಿದರು.
2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಸದ್ಯ ಸಿಬಿಐ ಪ್ರಕರಣದಿಂದ ಇವರು ಮುಕ್ತರಾಗಿದ್ದು ಕೇಂದ್ರ ಸರ್ಕಾರದ ನಡೆ ಚರ್ಚೆಗೀಡು ಮಾಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm