ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್‌ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್‌ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am