ಬ್ರೇಕಿಂಗ್ ನ್ಯೂಸ್
15-03-26 05:08 pm HK News Desk ದೇಶ - ವಿದೇಶ
ನವದೆಹಲಿ, ಮಾರ್ಚ್ 15: ಕೇಂದ್ರ ಚುನಾವಣಾ ಆಯೋಗವು ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ದಿನಾಂಕವನ್ನು ಘೋಷಿಸಿದೆ. ಪಶ್ಚಿಮ ಬಂಗಾಳದಲ್ಲಿ ಎಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದರೆ, ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಚುನಾವಣೆ ಘೋಷಣೆಯಾಗಿದೆ.
ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಫಲಿತಾಂಶವು ಮೇ 4 ರಂದು ಪ್ರಕಟವಾಗಲಿದೆ.
ಪಶ್ಚಿಮ ಬಂಗಾಳ (ಒಟ್ಟು ಸ್ಥಾನಗಳು: 294)
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಎರಡು ಹಂತಗಳಲ್ಲಿ (ಏಪ್ರಿಲ್ 23 ಮತ್ತು 29) ಮತದಾನ ನಡೆಯುತ್ತಿರುವುದು ವಿಶೇಷ. ಕಳೆದ ಬಾರಿ (2021) 8 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಈ ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ.
ತಮಿಳುನಾಡು (ಒಟ್ಟು ಸ್ಥಾನಗಳು: 234)
ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ DMK-ಕಾಂಗ್ರೆಸ್ ಮೈತ್ರಿಕೂಟ ಮತ್ತು AIADMK-ಬಿಜೆಪಿ ಮೈತ್ರಿಕೂಟದ ನಡುವೆ ನೇರ ಪೈಪೋಟಿ ಇದೆ. ಅಲ್ಲದೆ, ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಈ ಚುನಾವಣೆಯಲ್ಲಿ ಯಾವ ಮಟ್ಟದ ಪ್ರಭಾವ ಬೀರಲಿದೆ ಎಂಬ ಕುತೂಹಲ ಮೂಡಿಸಿದೆ.
ಕೇರಳ (ಒಟ್ಟು ಸ್ಥಾನಗಳು: 140)
ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಆಡಳಿತಾರೂಢ LDF (ಎಡರಂಗ) ಮತ್ತು ಪ್ರತಿಪಕ್ಷ UDF (ಕಾಂಗ್ರೆಸ್ ನೇತೃತ್ವ) ನಡುವೆ ಸಾಂಪ್ರದಾಯಿಕ ಹೋರಾಟವಿದೆ. ಇದರ ಜೊತೆಗೆ, ಬಿಜೆಪಿ ಕೆಲವು ಕ್ಷೇತ್ರಗಳಲ್ಲಿ ಪೈಪೋಟಿ ಒಡ್ಡಲಿದೆ.
ಅಸ್ಸಾಂ (ಒಟ್ಟು ಸ್ಥಾನಗಳು: 126)
ಅಸ್ಸಾಂನಲ್ಲೂ ಎಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಅಧಿಕಾರಕ್ಕೆ ಮರಳಲು ಹವಣಿಸುತ್ತಿದೆ. ಇಲ್ಲಿಯೂ ನೇರ ಪೈಪೋಟಿ ಇರಲಿದೆ.
ಚುನಾವಣೆ ಘೋಷಣೆಯಾದ ಇಂದಿನಿಂದಲೇ (ಮಾರ್ಚ್ 15) ಈ ಎಲ್ಲಾ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಪಶ್ಚಿಮ ಬಂಗಾಳದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟು ಹೆಚ್ಚಿನ ಸಂಖ್ಯೆಯ ಕೇಂದ್ರ ಭದ್ರತಾ ಪಡೆಗಳನ್ನ ನಿಯೋಜಿಸಲಾಗುತ್ತಿದೆ. ಐದು ರಾಜ್ಯಗಳ ವಿಧಾನಸಭೆಗಳ ಅವಧಿ ಇದೇ ಮೇ ಮತ್ತು ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ.
ಎಸ್ಐಆರ್ ಬಳಿಕದ ಮೊದಲ ಚುನಾವಣೆ
ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಒಟ್ಟು 17.5 ಕೋಟಿ ಜನರು ಅಲ್ಲಿನ ಅಸೆಂಬ್ಲಿ ಚುನಾವಣೆಯಲ್ಲಿ ಆಡಳಿತವನ್ನು ನಿರ್ಧರಿಸಲಿದ್ದಾರೆ. ಇದಕ್ಕಾಗಿ 2.51 ಲಕ್ಷ ಬೂತ್ ಗಳನ್ನು ರೂಪಿಸಲಾಗುವುದು. ಒಟ್ಟು 900ಕ್ಕು ಹೆಚ್ಚು ಅಸೆಂಬ್ಲಿ ಕ್ಷೇತ್ರಗಳ ಚುನಾವಣೆ ನಡೆಯಲಿದ್ದು ಮತಪಟ್ಟಿಯ ವಿಶೇಷ ಪರಿಷ್ಕರಣೆ ಬಳಿಕ ನಡೆಯುವ ಮೊದಲ ಚುನಾವಣೆ ಇದಾಗಿದೆ. ಜನಸಂಖ್ಯೆ ದೃಷ್ಟಿಯಿಂದ ಆಸ್ಟ್ರೇಲಿಯಾ, ಜರ್ಮನಿಯಂತಹ ದೇಶಗಳ ಚುನಾವಣೆಗಿಂತ ದೊಡ್ಡದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಹೇಳಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am