ಬ್ರೇಕಿಂಗ್ ನ್ಯೂಸ್
16-03-26 09:30 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 16: ಭಾರತ ಮೂಲದ ಧಾರ್ಮಿಕ ಸಂಘಟನೆ ಆರ್‌ಎಸ್‌ಎಸ್ ಬ್ಯಾನ್ ಮಾಡುವಂತೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತದ ಗುಪ್ತಚರ ಸಂಸ್ಥೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಮೇಲೆ (RAW) ಡೊನಾಲ್ಡ್ ಟ್ರಂಪ್ ಸರ್ಕಾರ ನಿರ್ಬಂಧ ವಿಧಿಸಬೇಕು ಎಂದು ಯುನೈಟೆಡ್ ಸ್ಟೇಟ್ಸ್ ಆಯೋಗ (USCIRF) ಹೇಳಿದೆ. ವರದಿಯು ಎರಡೂ ಸಂಸ್ಥೆಗಳ ಕಾರ್ಯ ವಿಧಾನಗಳ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಾಗರಿಕರ ಮೇಲಿನ ಕಿರುಕುಳದ ಆಧಾರದ ಮೇಲೆ ಭಾರತಕ್ಕೆ ಶಸ್ತ್ರಾಸ್ತ್ರಗಳ ಮಾರಾಟ ನಿಲ್ಲಿಸಲು ಸಹ ಆಯೋಗ ಶಿಫಾರಸು ಮಾಡಿದೆ.
ಭಾರತ ಮತ್ತು ಅಮೆರಿಕ ನಡುವಿನ ಭವಿಷ್ಯದ ಮಿಲಿಟರಿ ಮತ್ತು ವ್ಯಾಪಾರ ಸಂಬಂಧವನ್ನು ಧಾರ್ಮಿಕ ಸ್ವಾತಂತ್ರ್ಯದ ಆಧಾರದ ಮೇಲೆ ಮರು ಪರಿಶೀಲಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆರ್‌ಎಸ್‌ಎಸ್ ವಿರುದ್ಧ ಅಮೇರಿಕನ್ ಸಮಿತಿ ಸೂಚಿಸಿದ ನಿರ್ಬಂಧಗಳಲ್ಲಿ ಸಂಸ್ಥೆಯ ಆಸ್ತಿಗಳನ್ನು ವಶಪಡಿಸುವುದು ಮತ್ತು ಅದರ ಸದಸ್ಯರು ಅಮೆರಿಕಕ್ಕೆ ಪ್ರವೇಶಿಸುವುದನ್ನು ನಿಷೇಧಿಸುವುದು ಸೇರಿವೆ. ಆಯೋಗವು ಭಾರತದ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ವಿರುದ್ಧವೂ ಶಿಫಾರಸುಗಳನ್ನು ಮಾಡಿದೆ. ಆಯೋಗದ 2026ರ ವಾರ್ಷಿಕ ವರದಿಯಲ್ಲಿ ಇದನ್ನು ಸೂಚಿಸಲಾಗಿದೆ.
ಯುಎಸ್‌ಸಿಐಆರ್‌ಎಫ್ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೇಲ್ವಿಚಾರಣೆ ಮಾಡುವ ಮತ್ತು ಶ್ವೇತಭವನಕ್ಕೆ ಶಿಫಾರಸು ಮಾಡುವ ಅಮೆರಿಕದ ಸ್ವತಂತ್ರ ಸಂಸ್ಥೆಯಾಗಿದೆ.
ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಆರೋಪ:
ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಸಂಚುಗಳಲ್ಲಿ RAW ಭಾಗಿಯಾಗಿದೆ ಎಂದು 2025 ರಲ್ಲಿ ಆಯೋಗವು ಆರೋಪಿಸಿತ್ತು. ಇದರಿಂದ ಭಾರತವನ್ನು ನಿರ್ದಿಷ್ಟ ಕಾಳಜಿಯ ದೇಶ (CPC) ಎಂದು ಹೆಸರಿಸುವಂತೆ ಆಯೋಗವು ಟ್ರಂಪ್ ಆಡಳಿತಕ್ಕೆ ಒತ್ತಾಯಿಸಿದೆ. ಆಯೋಗವು ನಿರ್ದಿಷ್ಟ ಕಾಳಜಿಯ ದೇಶಗಳೆಂದು ಹೆಸರಿಸಲು ಶಿಫಾರಸು ಮಾಡಿದ 18 ದೇಶಗಳಲ್ಲಿ ಭಾರತವೂ ಸೇರಿದೆ. ಭಾರತದ ಜೊತೆಗೆ, ಈ ಪಟ್ಟಿಯಲ್ಲಿ ಅಫ್ಘಾನಿಸ್ತಾನ, ಮ್ಯಾನ್ಮಾರ್, ಚೀನಾ, ಕ್ಯೂಬಾ, ಎರಿಟ್ರಿಯಾ, ಇರಾನ್, ಲಿಬಿಯಾ, ನಿಕರಾಗುವಾ, ನೈಜೀರಿಯಾ, ಉತ್ತರ ಕೊರಿಯಾ, ಪಾಕಿಸ್ತಾನ, ರಷ್ಯಾ, ಸೌದಿ ಅರೇಬಿಯಾ, ಸಿರಿಯಾ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ವಿಯೆಟ್ನಾಂ ಸೇರಿವೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am