ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am