ಬ್ರೇಕಿಂಗ್ ನ್ಯೂಸ್
07-04-26 11:42 am HK News Staffer ದೇಶ - ವಿದೇಶ
ಟೆಹ್ರಾನ್, ಏ 07: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಲ್ಭಣವಾಗುತ್ತಿರುವ ನಡುವೆ ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಅದರ ಪ್ರಮುಖ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದು, ಈ ಡೆಡ್ ಲೈನ್ ಮುಕ್ತಾಯವಾಗಲು ಇನ್ನೂ ಕೇವಲ ಕೆಲ ಗಂಟೆಗಳಷ್ಟೇ ಬಾಕಿಯಿದೆ. ಈ ಬೆನ್ನಲ್ಲೇ, ಇರಾನ್ ಆಡಳಿತ ಈ ಮೂಲಸೌಕರ್ಯಗಳ ಸುತ್ತಲೂ ಒಟ್ಟುಗೂಡಿ ಮಾನವ ಸರಪಳಿ ನಿರ್ಮಿಸುವ ಮೂಲಕ,ಸಾಂಕೇತಿಕ ಒಗ್ಗಟ್ಟನ್ನು ಪ್ರದರ್ಶಿಸುವಂತೆ ತನ್ನ ದೇಶದ ಯುವ ಸಮುದಾಯಕ್ಕೆ ಕರೆ ನೀಡಿದೆ.
ಟ್ರಂಪ್ ಗಡುವು ಮುಗಿಯಲು ಕೆಲ ಸಮಯವಷ್ಟೇ ಬಾಕಿಯಿರುವಾಗ ದಾಳಿಯ ವಿರುದ್ದ ದೇಶದ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ವಿರೋಧ ವ್ಯಕ್ತಪಡಿಸುವ ನಿಟ್ಟಿನಲ್ಲಿ ಇರಾನ್ನ ಕ್ರೀಡಾ ಮತ್ತು ಯುವಜನ ಸಚಿವಾಲಯವು ಪ್ರಕಟಣೆ ಬಿಡುಗಡೆ ಮಾಡಿದ್ದು "ಕ್ರೀಡಾಪಟುಗಳು, ಕಲಾವಿದರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇರಾನ್ನ ಯುವಕರು ಏ.7ಕ್ಕೆ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಗೆ ಪ್ರಮುಖ ಇಂಧನ ಮೂಲಸೌಕರ್ಯಗಳ ಬಳಿ ಒಟ್ಟುಗೂಡುವಂತೆ ಕೇಳಿಕೊಂಡಿದೆ. ಈ ಮೂಲಕ ಅಮೆರಿಕಾದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವಾಗ ಇರಾನ್ನ ರಾಷ್ಟ್ರೀಯ ಆಸ್ತಿಗಳನ್ನು ರಕ್ಷಿಸಲು ಬೆಂಬಲವನ್ನು ಸಂಗ್ರಹಿಸುವ ಗುರಿಯನ್ನು ಈ ಕ್ರಮಕೈಗೊಳ್ಳಲಾಗಿದೆ" ಎಂದು ಅಧಿಕಾರಿಗಳು ಹೇಳುತ್ತಾರೆ.
ಕೋಮಾದಲ್ಲಿದ್ದಾರಾ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ?
ಇನ್ನು, ದೇಶದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಈವರೆಗೂ ದೇಶದ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಇಲ್ಲ. ಇದು ಅವರು ಆರೋಗ್ಯ ಪರಿಸ್ಥಿತಿಯ ಕುರಿತು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದ್ದು, ಈ ನಡುವೆ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪ್ರಸ್ತುತ ಇರಾನ್ನ ಕೋಮ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಮೆರಿಕ-ಇಸ್ರೇಲಿ ಗುಪ್ತಚರ ಮೂಲಗಳು ತನ್ನ ಗಲ್ಫ್ ಮಿತ್ರರಾಷ್ಟ್ರಗಳೊಂದಿಗೆ ಹಂಚಿಕೊಂಡ ರಾಜತಾಂತ್ರಿಕ ಜ್ಞಾಪಕ ಪತ್ರದ ಒಳಹರಿವುಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ ಮಾಡಿದೆ.
ಈ ವರದಿಯ ಪ್ರಕಾರ, ಫೆ.28 ರಂದು ಇರಾನ್ನ ಹಿಂದಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಯಾದ ಅದೇ ವೈಮಾನಿಕ ದಾಳಿಯಲ್ಲಿ ಖಮೇನಿ ಗಂಭೀರ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಪ್ರಜ್ಞಾಹೀನಸ್ಥಿತಿಯಲ್ಲಿ ಅಥವಾ ಕೋಮಾದಲ್ಲಿ ಇದ್ದು, ಕೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಪರಿಣಾಮವಾಗಿ ದೇಶವನ್ನು ಮುನ್ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am