ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm