ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್‌ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am