ಬ್ರೇಕಿಂಗ್ ನ್ಯೂಸ್
05-05-26 10:27 pm HK News Staffer ದೇಶ - ವಿದೇಶ
ಚೆನ್ನೈ, ಮೇ 5: ತಮಿಳುನಾಡು ಚುನಾವಣೆಯಲ್ಲಿ ದಳಪತಿ ಖ್ಯಾತಿಯ ವಿಜಯ್ ಅವರ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಮೂಲಕ ವಿಜಯ್ ರಾಜ್ಯದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ.
ತಮಿಳಿನ ಸ್ಟಾರ್ ನಟನಾಗಿ, ವೃತ್ತಿ ಬದುಕಿನ ಉತ್ತುಂಗದಲ್ಲಿದ್ದಾಗಲೇ ವಿಜಯ್ ಸಿನಿಮಾ ಬಿಟ್ಟು ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರ ನಡೆ ಬಹುತೇಕರಿಗೆ ಅಚ್ಚರಿ ತಂದಿತ್ತು. ಚುನಾವಣೆಯಲ್ಲಿ ಅವರಿಗೆ ಹೆಚ್ಚೇನೂ ಸ್ಥಾನ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ವಿಜಯ್ ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗಳಿಸಿ ಹೊಸ ಇತಿಹಾಸ ಬರೆದಿದೆ.
ವಿಜಯ್ ಅವರ ಗೆಲುವು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನಟ ವಿಜಯ್ ಅವರು ಮಾಜಿ ಸಿಎಂ ಕರುಣಾನಿಧಿ ಜೊತೆಗೆ ನಿಂತುಕೊಂಡಿದ್ದ ಹಳೆಯ ಫೋಟೋವನ್ನು ಹಂಚಿಕೊಂಡಿದ್ದು, ಕುಹಕದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೊ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯನ್ನು ದೊಡ್ಡ ಅಂತರದಲ್ಲಿ ಸೋಲಿಸಿ ದ್ರಾವಿಡ ನಾಡಿನಲ್ಲಿ ನೂತನ ಸಿಎಂ ಆಗಲು ವಿಜಯ್ ಸಜ್ಜಾಗಿರುವಾಗಲೇ ಈ ಫೋಟೊ ಬಂದಿರುವುದು ಗಮನ ಸೆಳೆದಿದೆ.
ಸ್ಟಾಲಿನ್ ಸೋಲಿನ ಬೆನ್ನಲ್ಲೇ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ವಿಜಯ್ ಅವರ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವುದನ್ನು ಕಾಣಬಹುದು. ಈ ಫೋಟೋಗೆ ಆರ್ಜಿವಿ ತಮ್ಮದೇ ಧಾಟಿಯಲ್ಲಿ ವರ್ಣನೆ ನೀಡಿದ್ದಾರೆ. 'ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತನ್ನ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕಲೈಂಜರ್ (ಕರುಣಾನಿಧಿ) ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ," ಎಂದು ಬರೆದಿದ್ದಾರೆ.
ವಿಜಯ್ ಅವರ ಈ ಐತಿಹಾಸಿಕ ಗೆಲುವಿಗೆ ಸ್ಟಾರ್ ನಟರಾದ ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಖುಷ್ಟೂ ಸುಂದರ್, ಕೀರ್ತಿ ಸುರೇಶ್, ಎ.ಆರ್. ರೆಹಮಾನ್, ಶಿವಕಾರ್ತಿಕೇಯನ್, ಮೋಹನ್ ಲಾಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
In a surprising political twist, actor-turned-politician Vijay, popularly known as “Dalapathi,” has shaken the political landscape of Tamil Nadu. A viral photo circulating on social media shows a younger Vijay standing behind veteran leader M. Karunanidhi, sparking widespread चर्चा and nostalgia.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am