ಬ್ರೇಕಿಂಗ್ ನ್ಯೂಸ್
07-05-26 10:29 pm HK News Staffer ದೇಶ - ವಿದೇಶ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲ ಆರ್ಎನ್ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹೀನಾಯ ಸೋಲು ಕಂಡಿದ್ದರೂ, ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ರಾಜಕೀಯ ಹೈಡ್ರಾಮಾ ಮುಂದುವರಿಸಿದ್ದರು.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಟಿಎಂಸಿ ಸೋತಿಲ್ಲ, ಚುನಾವಣಾ ಆಯೋಗದ ಕಾರಣ ಬಿಜೆಪಿ ಗೆದ್ದಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ” ಎಂದು ಸವಾಲು ಹಾಕಿದ್ದರು. ಈ ಹೇಳಿಕೆ ಬಂಗಾಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇದೀಗ ಸಂವಿಧಾನದ 172ನೇ ವಿಧಿಯ ಪ್ರಕಾರ, 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ 17ನೇ ವಿಧಾನಸಭೆಯ ಐದು ವರ್ಷದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಭೆಯ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲ ಆರ್ಎನ್ ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 07ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ಈ ಕ್ರಮದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ 294 ಶಾಸಕರ ಸದಸ್ಯತ್ವವೂ ರದ್ದುಗೊಂಡಿದೆ. ಮಮತಾ ರಾಜೀನಾಮೆ ನೀಡಲು ನಿರಾಕರಿಸಿದ್ದರೂ, ಸಂವಿಧಾನಾತ್ಮಕ ಪ್ರಕ್ರಿಯೆಯಂತೆ ಅವರ ಸರ್ಕಾರದ ಅವಧಿ ಅಂತ್ಯಗೊಂಡಿರುವುದರಿಂದ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಸಾಧಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಅಚ್ಚರಿಯ ಸಂಗತಿ ಎಂದರೆ, ಸ್ವತಃ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಲ್ಲೇ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಇದೀಗ ರಾಜ್ಯಪಾಲರು ಬಹುಮತ ಪಡೆದ ಬಿಜೆಪಿ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸುವ ಸಾಧ್ಯತೆ ದಟ್ಟವಾಗಿದ್ದು, ಮೇ 9ರಂದು ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ತಿರುವು ಎಂದು ವಿಶ್ಲೇಷಿಸಲಾಗುತ್ತಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am