ಬ್ರೇಕಿಂಗ್ ನ್ಯೂಸ್
09-05-26 11:14 am HK News Staffer ದೇಶ - ವಿದೇಶ
ನವದೆಹಲಿ, ಮೇ 9: ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ, ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೆರೆ ರಾಷ್ಟ್ರ ಚೀನಾ ಸಹಾಯ ಮಾಡಿರುವುದು ಈಗ ಸ್ಪಷ್ಟವಾಗಿದೆ. ಸ್ವತಃ ಚೀನಾ ಈ ಅಂಶವನ್ನು ಒಪ್ಪಿಕೊಂಡಿದೆ.
ಭಾರತದೊಂದಿಗಿನ ಯುದ್ಧ ಸಮಯದಲ್ಲಿ ಪಾಕಿಸ್ತಾನಕ್ಕೆ ಆನ್-ಸೈಟ್ ತಾಂತ್ರಿಕ ಬೆಂಬಲವನ್ನು ನೀಡಿರುವುದಾಗಿ ಚೀನಾ ಮೊದಲ ಬಾರಿಗೆ ದೃಢಪಡಿಸಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು, ಪೆಹಲ್ಗಾಮ್ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರನ್ನು ಭಯೋತ್ಪಾದಕರು ಕೊಂದಿದ್ದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ 9 ಭಯೋತ್ಪಾದನಾ ಶಿಬಿರಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿತ್ತು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರವಾದಿ ಗುಂಪುಗಳಿಗೆ ಸೇರಿದ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು. ಚೀನಾದ ಟಿವಿ ಮಾಧ್ಯಮವೊಂದು ವಾಯುಯಾನ ಉದ್ಯಮ ನಿಗಮದ ಎಂಜಿನಿಯರ್ಗಳು ಪಾಕಿಸ್ತಾನಿ ಕಾರ್ಯಾಚರಣೆಗಳನ್ನು ಬೆಂಬಲಿಸಿದ್ದಾಗಿ ತಿಳಿಸಿದ್ದಾರೆ. ಆಮೂಲಕ ಭಾರತ- ಪಾಕಿಸ್ತಾನ ಘರ್ಷಣೆಯಲ್ಲಿ ಚೀನಾದ ಸಿಬ್ಬಂದಿ ಪಾತ್ರ ವಹಿಸಿದ್ದಾರೆ ಎಂಬುದನ್ನು ಈ ಮೂಲಕ ಬೀಜಿಂಗ್ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ಚೆಂಗ್ಡು ವಿಮಾನ ವಿನ್ಯಾಸ ಮತ್ತು ಸಂಶೋಧನಾ ಸಂಸ್ಥೆಯ ಎಂಜಿನಿಯರ್ ಜಾಂಗ್ ಹೆಂಗ್, ಸಂಘರ್ಷದ ಸಮಯದಲ್ಲಿ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲ ನೀಡಿದವರಲ್ಲಿ ಒಬ್ಬರು ಎಂದು ವರದಿ ತಿಳಿಸಿದೆ. ಈ ಸಂಸ್ಥೆ ಚೀನಾದ ಮುಂದುವರಿದ ಯುದ್ಧ ವಿಮಾನಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳ ಪ್ರಮುಖ ಅಭಿವೃದ್ಧಿ ಸಂಸ್ಥೆಯಾಗಿದೆ. ಪಾಕಿಸ್ತಾನದ ವಾಯುಪಡೆಯು ಚೀನಾದ AVIC ಅಂಗಸಂಸ್ಥೆಯಿಂದ ತಯಾರಾದ ಚೀನಾ ನಿರ್ಮಿತ J-10CE ಜೆಟ್ಗಳನ್ನು ಯುದ್ಧಕ್ಕೆ ಬಳಸಿತ್ತು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm