ಬ್ರೇಕಿಂಗ್ ನ್ಯೂಸ್
21-05-26 02:49 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 21: ನಿರುದ್ಯೋಗಿ ಯುವಕರ ಬಗ್ಗೆ ಸಿಜೆಐ ಸೂರ್ಯಕಾಂತ್ ನೀಡಿದ್ದ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡ ಜೆನ್ ಜಿ ಯುವಕರು ದೇಶದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದ್ದಾರೆ. 'ಕಾಕ್ರೋಚ್ ಜನತಾ ಪಾರ್ಟಿ' ಹೆಸರಲ್ಲಿ ಜಾಲತಾಣದಲ್ಲಿ ಮೀಮ್ಸ್, ವಿಡಂಬನೆಯ ಪೋಸ್ಟ್ ಗಳನ್ನು ಸೃಷ್ಟಿಸಲಾಗಿದ್ದು ಯುವ ಸಮುದಾಯದಿಂದ ಭಾರೀ ಸ್ಪಂದನೆ ವ್ಯಕ್ತವಾಗಿದೆ.
ನಿರುದ್ಯೋಗಿ ಯುವಕರು ಜಿರಳೆಗಳಂತೆ ಎಂದು ಸಿಜೆಐ ನೀಡಿದ್ದ ಹೇಳಿಕೆಗೆ ಭಾರೀ ಆಕ್ಷೇಪ ಕೇಳಿಬಂದಿದೆ. ಯುವಕರನ್ನು ಆ ರೀತಿ ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹಲವು ರಾಜಕೀಯ ನಾಯಕರು ಟೀಕಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಿಜೆಐ, ಭಾರತೀಯ ಯುವಕರ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದರು.
ಕಳೆದ ಕೆಲವು ವರ್ಷಗಳಿಂದ, ಉದ್ಯೋಗ ಕೊರತೆ, ಸ್ಪರ್ಧಾತ್ಮಕ ಪರೀಕ್ಷೆಯ ಒತ್ತಡ, ಭ್ರಷ್ಟಾಚಾರ ಕುರಿತು ಆನ್‌ಲೈನ್ ಸಂಭಾಷಣೆಗಳು ಯುವಕರಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಇದನ್ನೇ ಆಧಾರವಾಗಿಟ್ಟು ಈಗ, ಹೊಸ ಚಳವಳಿಯೇ ಹುಟ್ಟಿಕೊಂಡಿದೆ. ಕಾಕ್ರೋಚ್ (ಜಿರಳೆ) ಹೆಸರಲ್ಲೇ ಅಭಿಜಿತ್ ದೀಪ್ಕೆ ಎಂಬವರು ಜಾಲತಾಣದಲ್ಲಿ ಚಳವಳಿ ಆರಂಭಿಸಿದ್ದು ಜನ ಸಮುದಾಯವನ್ನು ಬಡಿದೆಬ್ಬಿಸಿದ್ದಾರೆ. ಯಾವುದೇ ಪಕ್ಷದ ಪರ- ವಿರೋಧ ಇಲ್ಲದಿದ್ದರೂ, ವಿಪಕ್ಷಗಳು ಮತ್ತು ಆಡಳಿತ ಪಕ್ಷಗಳು ಈ ಹೆಸರನ್ನು ಪರಸ್ಪರ ಟೀಕಿಸಲು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ.

ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕ ವಿದ್ಯಾರ್ಥಿಯಾಗಿದ್ದ ಅಭಿಜೀತ್ ದೀಪ್ಕೆ, ಈ ಹಿಂದೆ 2020 ಮತ್ತು 2023 ರ ನಡುವೆ ಆಮ್ ಆದ್ಮಿ ಪಕ್ಷದ ರಾಜಕೀಯ ಪ್ರಚಾರಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು. ದೀಪ್ಕೆಗೆ ಇನ್ಸ್ಟಾಗ್ರಾಂನಲ್ಲಿ 9 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಎಕ್ಸ್ ಜಾಲತಾಣದಲ್ಲಿ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಮತ್ತು ರಾಜಕೀಯ ವಿಡಂಬನಾಕಾರನಾಗಿ ಪ್ರಚಲಿತದಲ್ಲಿದ್ದಾರೆ. ದೇಶದ ಪ್ರಚಲಿತ ರಾಜಕೀಯ ವಿದ್ಯಮಾನಗಳನ್ನು ಲೇವಡಿ ಮಾಡುತ್ತ ಪೋಸ್ಟ್‌ಗಳನ್ನು ಹಾಕುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರಸ್ತುತ ದೇಶದಲ್ಲಿ ಕೇವಲ ತಮಾಷೆಯ ಮೀಮ್ಸ್ ಆಗುಳಿಯದೆ, ಜೆನ್ ಝೀ (Gen Z – ಯುವ ಪೀಳಿಗೆ) ಯುವಕರ ಅತ್ಯಂತ ಶಕ್ತಿಶಾಲಿ ಡಿಜಿಟಲ್ ಪ್ರತಿಭಟನೆಯಾಗಿ ಮಾರ್ಪಡುತ್ತಿದೆ. ಕೇವಲ ಮೇ 16, 2026 ರಂದು ಆರಂಭವಾದ ಈ ಆನ್‌ಲೈನ್ ಮೂವ್‌ಮೆಂಟ್, ಕೆಲವೇ ದಿನಗಳಲ್ಲಿ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಯುವಜನತೆಯ ಅಸಮಾಧಾನ ಮತ್ತು ಆಕ್ರೋಶವನ್ನು ಹೊರಹಾಕುವ ದೊಡ್ಡ ವೇದಿಕೆಯಾಗಿ ಮಾರ್ಪಟ್ಟಿದೆ.
ಅಭಿಜಿತ್ ದೀಪ್ಕೆ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗುತ್ತಿದೆ. ಈ ಪೋಸ್ಟ್‌ಗೆ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. ನಾನು ಇದೇ ಆಗಲಿ ಎಂದು ಆಶಿಸುತ್ತೇನೆ. ನಮ್ಮ ದೇಶದ ಯುವಕರು ಎದ್ದು ನಿಂತು, ವಿರೋಧಿಸಿ ತಮ್ಮ ಹಕ್ಕುಗಳನ್ನು ಮರಳಿ ಪಡೆಯುವಂತಾಗಲಿ. ನಿಮ್ಮೆಲ್ಲರಿಗೂ ಇನ್ನಷ್ಟು ಶಕ್ತಿ ಸಿಗಲಿ ಎಂದು ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಕಾಕ್ರೋಚ್ ಪಾರ್ಟಿ ಪರ ಫಾಲೋವರ್ಸ್ ನಾಲ್ಕೇ ದಿನದಲ್ಲಿ ಭಾರೀ ಏರಿಕೆಯಾಗಿದೆ. ಕಾಕ್ರೋಚ್ ಜನತಾ ಪಕ್ಷದ ಫಾಲೋವರ್ಸ್ ಸಂಖ್ಯೆ 8.8 ಮಿಲಿಯನ್ ಆಗಿದ್ದರೆ, ಬಿಜೆಪಿ ಪಕ್ಷದ್ದು 8.7 ಮಿಲಿಯನ್ ಇದೆ. ಕೇವಲ ನಾಲ್ಕು ದಿನಗಳಲ್ಲಿ ಬಿಜೆಪಿಯ ದಾಖಲೆಯನ್ನು ಕಾಕ್ರೋಚ್ ಜನತಾ ಪಕ್ಷ ಮುರಿದಿರುವುದು ಮತ್ತೆ ವಿಡಂಬನೆಗೆ ಕಾರಣವಾಗಿದೆ. ಆದರೆ ಈ ಫಾಲೋವರ್ಸ್‌ಗಳ ಸಂಖ್ಯೆಯಲ್ಲಿ ಪಾಕಿಸ್ತಾನದವರು, ಬಾಂಗ್ಲಾದೇಶ ಯುವಕರು ಇದ್ದಾರೆ ಎಂದು ಹಲವರು ವಿರೋಧಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am