ಬ್ರೇಕಿಂಗ್ ನ್ಯೂಸ್
27-05-26 08:36 pm HK News Staffer ದೇಶ - ವಿದೇಶ
ತಿರುವನಂತಪುರ, ಮೇ 27: ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯಲ್ಲಿ, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿ 10 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಈ ಶೋಧ ಕಾರ್ಯಾಚರಣೆ ನಡೆದಿದ್ದು, ಕೇರಳ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ದಾಳಿ ನಡೆದಿರುವುದು ವಿಶೇಷ ಗಮನ ಸೆಳೆದಿದೆ.
ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರಿ ಟಿ. ವೀಣಾ ಅವರ ಹೆಸರಿದ್ದು, ಅವರ ಒಡೆತನದ ‘ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಯಾವುದೇ ಸೇವೆಗಳನ್ನು ನೀಡದೇ ಸಿಎಂಆರ್‌ಎಲ್ ಕಂಪನಿಯಿಂದ ದೊಡ್ಡ ಮೊತ್ತದ ಹಣ ಪಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಆರ್ಥಿಕ ಅಕ್ರಮದ ಕುರಿತಾಗಿ ಇಡಿ ತನಿಖೆ ಚುರುಕುಗೊಂಡಿದೆ.

ಇದರ ಭಾಗವಾಗಿ, ಮಾಜಿ ಸಚಿವ ಹಾಗೂ ಪ್ರಸ್ತುತ ಶಾಸಕರಾಗಿರುವ ಪಿ.ಎ. ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ. ಅವರು ಟಿ. ವೀಣಾ ಅವರ ಪತಿಯಾಗಿದ್ದಾರೆ.
ಕೈಗಾರಿಕಾ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಎಂಆರ್‌ಎಲ್ ಕಂಪನಿ, ಲಂಚ ಮತ್ತು ಮನಿ ಲಾಂಡರಿಂಗ್ ಆರೋಪಗಳಿಂದ ಈಗಾಗಲೇ ತನಿಖೆಯ ಕಣ್ಣಿನಡಿಯಲ್ಲಿ ಇದೆ. 2017ರಿಂದ 2020ರ ಅವಧಿಯಲ್ಲಿ ಟಿ. ವೀಣಾ ಅವರ ಸಂಸ್ಥೆಗೆ ಯಾವುದೇ ಸೇವೆ ನೀಡದಿದ್ದರೂ ಸುಮಾರು 1.72 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂಬ ಆರೋಪ 2023ರಲ್ಲೇ ಬಹಿರಂಗವಾಗಿತ್ತು.
ನಂತರ ಕೇಂದ್ರ ಸರ್ಕಾರದ ಗಂಭೀರ ವಂಚನೆ ತನಿಖಾ ಕಚೇರಿ ನಡೆಸಿದ ಸುದೀರ್ಘ ತನಿಖೆಯಲ್ಲಿ, ಒಟ್ಟು 2.70 ಕೋಟಿ ರೂಪಾಯಿಗಳ ಪಾವತಿ ನಡೆದಿರುವುದು ಪತ್ತೆಯಾಗಿದೆ. ಎಸ್‌ಎಫ್‌ಐಒ ತನ್ನ 160 ಪುಟಗಳ ವರದಿಯಲ್ಲಿ ಟಿ. ವೀಣಾ, ಸಿಎಂಆರ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್ ಕರ್ತಾ ಸೇರಿದಂತೆ 25 ಮಂದಿಯನ್ನು ಪ್ರಮುಖ ಆರೋಪಿಗಳೆಂದು ಉಲ್ಲೇಖಿಸಿದೆ.
ಕಳೆದ ಏಪ್ರಿಲ್‌ನಲ್ಲಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಟಿ. ವೀಣಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮೋದನೆ ನೀಡಿತ್ತು. ಪ್ರಸ್ತುತ ಅವರ ವಿರುದ್ಧ ಕಂಪನಿ ಕಾಯ್ದೆ 2013ರ ಸೆಕ್ಷನ್ 447 ಅಡಿಯಲ್ಲಿ ಕಾರ್ಪೊರೇಟ್ ವಂಚನೆ ಆರೋಪ ದಾಖಲಾಗಿದ್ದು, ಅಪರಾಧ ಸಾಬೀತಾದರೆ ಆರು ತಿಂಗಳಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಅವಕಾಶವಿದೆ.
ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಸರನ್ನು ನೇರ ಆರೋಪಿಯಾಗಿ ಉಲ್ಲೇಖಿಸದಿದ್ದರೂ, ಅವರ ಕುಟುಂಬದ ಸದಸ್ಯರು ತನಿಖೆಯ ವ್ಯಾಪ್ತಿಗೆ ಬಂದಿರುವುದು ಕೇರಳ ರಾಜಕಾರಣದಲ್ಲಿ ಭಾರೀ ಚರ್ಚೆ ಹಾಗೂ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am