ಬ್ರೇಕಿಂಗ್ ನ್ಯೂಸ್
06-06-26 05:48 pm HK News Staffer ದೇಶ - ವಿದೇಶ
ನವದೆಹಲಿ, ಜೂನ್ 6: NEET- UG ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನಾ ಕರೆಗೆ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿಗಿಳಿದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆಯ ಬೆಂಬಲಿಗರು ಜಿರಳೆ ಮುಖವಾಡಗಳನ್ನು ಧರಿಸಿ, ಕೈಯಲ್ಲಿ ಹೂವುಗಳು, ಪುಸ್ತಕಗಳು ಹಾಗೂ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಹಲವಾರು ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.





ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆಯನ್ನು ಶಾಂತಿಯುತ ನಡೆಸುವಂತೆ ಕರೆ ನೀಡಿದ್ದು, ಪೊಲೀಸರಿಗೆ ಹೂವುಗಳನ್ನು ನೀಡಿ ಗೌರವ ಸೂಚಿಸಬೇಕು ಹಾಗೂ ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು. ಮೊದಲು ಸಂಸತ್ ಮಾರ್ಗ ಪೊಲೀಸ್ ಠಾಣೆಯ ಮುಂದೆ ಸೇರಲು ಬೆಂಬಲಿಗರಿಗೆ ಸೂಚಿಸಲಾಗಿತ್ತು. ಆದರೆ, ನಂತರ ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನೇರವಾಗಿ ಅಲ್ಲಿಗೆ ತೆರಳಿದರು.
ಪ್ರತಿಭಟನೆ ವೇಳೆ "ಕಾಕ್ರೋಚ್ಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೊರಟು ಹೋಗುತ್ತಿದ್ದಾರೆ" ಎಂಬ ಘೋಷಣೆಗಳನ್ನು ಕೂಗಲಾಗಿದ್ದು, NEET, CBSE, CUET ಹಾಗೂ SSC ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am