ಬ್ರೇಕಿಂಗ್ ನ್ಯೂಸ್
09-07-26 03:40 pm HK News Staffer ದೇಶ - ವಿದೇಶ
ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17 ರಂದು ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ. ಇರಾನ್ ತನ್ನ ಮಾತು ಕೇಳುತ್ತಿಲ್ಲ ಎಂದು ಅಮೆರಿಕದ ಪಡೆಗಳು ಮತ್ತೆ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಇದಕ್ಕೆದುರಾಗಿ ಇರಾನ್ ಪಡೆಗಳು ಬಹ್ರೇನ್, ಕುವೈತ್ ಹಾಗೂ ಕತಾರ್ನಲ್ಲಿರುವ ಅಮೆರಿಕದ ಸೇನಾನೆಲೆ ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ವೈಮಾನಿಕ ದಾಳಿಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್, ತಾತ್ಕಾಲಿಕ ಕದನ ವಿರಾಮ ಮುಕ್ತಾಯವಾಗಿದೆ ಎಂದು ಘೋಷಿಸಿದ್ದರು. ಅಮೆರಿಕ ಸೇನೆಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು 20 ಪ್ರತಿಶತ ಇದೇ ಜಲಸಂಧಿಯ ಮೂಲಕ ನಡೆಯುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತದೆ.
ಈ ನಡುವೆ ಇರಾನ್ ಸರ್ಕಾರಿ ಮಾಧ್ಯಮಗಳು, ಬುಶೆಹರ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಅಲ್ಲದೆ, ಪರಮಾಣು ವಿದ್ಯುತ್ ಸ್ಥಾವರ ಹೊಂದಿರುವ ಬುಶೆಹರ್ ನಗರ, ದಕ್ಷಿಣದ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ಬಂದರು ನಗರಗಳಲ್ಲಿ ಸ್ಫೋಟ ಉಂಟಾಗಿದೆ ಎಂದು ತಿಳಿಸಿವೆ. ವಿವಿಧ ನಗರ ಪ್ರದೇಶಗಳ ಮೇಲಿನ ದಾಳಿಯಲ್ಲಿ ಇರಾನ್ ಕಡೆಯ 14 ಜನರು ಸಾವಿಗೀಡಾಗಿದ್ದು 78 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.
ಇತ್ತ ಬಹ್ರೇನ್, ಕುವೈತ್ ಮತ್ತು ಕತಾರ್ ಕಡೆಗೆ ಇರಾನ್ ಉಡಾಯಿಸಿದ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಪರಿಣಾಮದ ಕುರಿತು ಆರಂಭಿಕ ಮಾಹಿತಿ ಲಭ್ಯವಾಗಿಲ್ಲ. ಆದರೆ, ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿ, ಹಲವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm