ಬ್ರೇಕಿಂಗ್ ನ್ಯೂಸ್
19-07-26 09:37 pm HK News Staffer ದೇಶ - ವಿದೇಶ
ತಿರುವನಂತಪುರಂ, ಜುಲೈ 19: ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್ ಕ್ರೇಜ್ ಕೇರಳದಲ್ಲಿ ಉತ್ತುಂಗಕ್ಕೇರಿದೆ. ಮಧ್ಯರಾತ್ರಿ 12.30ಕ್ಕೆ ಸ್ಪೇನ್ - ಅರ್ಜೆಂಟೀನಾ ಫೈನಲ್ ಪಂದ್ಯ ನಡೆಯುವುದರಿಂದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಧ್ಯರಾತ್ರಿ ಫುಟ್ಬಾಲ್ ಸಂಭ್ರಮಾಚರಣೆಗೆ ಅನುವಾಗುವಂತೆ ಸಿಎಂ ವಿಡಿ ಸತೀಶನ್ ಶಾಲೆ, ಕಾಲೇಜುಗಳಿಗೆ ರಜೆ ನೀಡಿದ್ದಾರೆ.
2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರೀ ಸಿದ್ಧತೆ ನಡೆದಿದ್ದು ಹಲವು ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಹಾಕಲಾಗಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಮಧ್ಯರಾತ್ರಿಯ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ನೆಮ್ಮದಿಯಿಂದ ವೀಕ್ಷಿಸಲು ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಕಾಲಮಾನ ನಡುರಾತ್ರಿ 12:30ಕ್ಕೆ ಪಂದ್ಯ ಆರಂಭವಾಗಲಿದ್ದು, ರಾತ್ರಿ ತಡವಾಗಿ ಪಂದ್ಯ ವೀಕ್ಷಿಸಿದ ಬಳಿಕ ಬೆಳಗ್ಗೆ ಶಾಲೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ರಜೆ ನೀಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಸೋಷಿಯಲ್ ಮೀಡಿಯಾದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಜೆ ನೀಡುವ ನಿರ್ಧಾರಕ್ಕೆ ರಾಜಕೀಯ ವಲಯದಿಂದಲೂ ಬೆಂಬಲ ವ್ಯಕ್ತವಾಗಿದೆ. ಮಾಜಿ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕೂಡ ವಿದ್ಯಾರ್ಥಿಗಳ ಮನವಿಗೆ ಬೆಂಬಲ ಸೂಚಿಸಿ, ಕಳೆದುಹೋಗುವ ಶೈಕ್ಷಣಿಕ ದಿನವನ್ನು ಮತ್ತೊಂದು ದಿನ ಕೆಲಸದ ದಿನವನ್ನಾಗಿ ಮಾಡಿ ಸರಿದೂಗಿಸಬಹುದು ಎಂದು ಸಲಹೆ ನೀಡಿದ್ದಾರೆ. ವಿರೋಧ ಪಕ್ಷದ ಎಲ್ ಡಿಎಫ್ ನಾಯಕರು ಕೂಡ ರಜೆ ಘೋಷಣೆಯನ್ನು ಬೆಂಬಲಿಸಿದ್ದಾರೆ.
ಕೇರಳ ರಾಜ್ಯವಷ್ಟೇ ಅಲ್ಲದೆ ಮೇಘಾಲಯ ಸರ್ಕಾರ ಕೂಡ ಫಿಫಾ ವಿಶ್ವಕಪ್ ಫೈನಲ್‌ಗಾಗಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದೆ. ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಜುಲೈ 20ರಂದು ರಾಜ್ಯದ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಧ್ಯರಾತ್ರಿ ನಡೆಯಲಿರುವ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ವೀಕ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am