ಬ್ರೇಕಿಂಗ್ ನ್ಯೂಸ್
20-07-26 02:22 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 20: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿಯಿಂದ ಹಮ್ಮಿಕೊಂಡಿರುವ ಸಂಸದ್ ಚಲೋ ಹೋರಾಟಕ್ಕೆ ಭಾರೀ ಸಂಖ್ಯೆಯಲ್ಲಿ ಜೆನ್ ಜೀ ವಿದ್ಯಾರ್ಥಿಗಳು ಸಾಥ್ ನೀಡಿದ್ದು ದೆಹಲಿಯ ಜಂತರ್ ಮಂತರ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂಸತ್ ಚಲೋಗೆ ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ನಡುವೆಯೇ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದ್ದು ವಿಪಕ್ಷ ನಾಯಕರು ಧರಣಿಗೆ ಬೆಂಬಲ ನೀಡಿದ್ದಾರೆ. ಟಿಎಂಸಿ ಸಂಸದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಗೂ ಸಂಸದ ಚಂದ್ರಶೇಖರ್ ಆಝಾದ್ ಅವರು ಸ್ಥಳಕ್ಕೆ ಬಂದು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಇದೇ ವೇಳೆ, ಸಿಜೆಪಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವುದರಿಂದ ಕೇಂದ್ರ ಸರ್ಕಾರ ಕಡೆಗೂ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಲು ಮುಂದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆಪಿ ನಡ್ಡಾ ಸಿಜೆಪಿ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆಂದು ಸಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. 22 ದಿನಗಳ ನಿರಶನ ಬಳಿಕ ಸಂಸದ್ ಚಲೋಗೆ ಭಾರೀ ಸಂಖ್ಯೆಯಲ್ಲಿ ಯುವ ಜನರು ಬೀದಿಗಿಳಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮೆತ್ತಗಾಗಿದೆ. ಯುವ ಜನರ ಆಕ್ರೋಶ ಇಡೀ ದೇಶ ಹಬ್ಬುವ ಮೊದಲು ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಮುಂದಾಗಿದೆ.


ಇದೇ ವೇಳೆ, ಪ್ರತಿಭಟನಾಕಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕುತ್ತಿದ್ದಾರೆ. ದೇಶದ ಪ್ರಮುಖ ಪರೀಕ್ಷಾ ವ್ಯವಸ್ಥೆಯಲ್ಲಾಗಿರುವ ಲೋಪಗಳಿಗೆ ಧರ್ಮೇಂದ್ರ ಪ್ರಧಾನ್ ಅವರೇ ಕಾರಣವೆಂದು ಪ್ರತಿಭಟನೆ ಮೂಲಕ ಬಿಂಬಿತ ಆಗುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ಇರಿಸುಮುರಿಸು ಎದುರಾಗಿದೆ. ಸ್ಥಳದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಜಂತರ್ ಮಂತರ್ನಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಶಬಾನಾ ಅಜ್ಮಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ನಟರು, ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಆಗಮಿಸಿದ್ದಾರೆ.
ಸಂಸತ್ ಚಲೋಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು ಆರ್ಪಿಎಫ್ ಸಿಬ್ಬಂದಿ ನಡುವೆ ಸಂಘರ್ಷ ಉಂಟಾಗಿದೆ. ಈ ಸಂದರ್ಭದಲ್ಲಿ ಗುಂಪನ್ನು ನಿಯಂತ್ರಿಸಲು ಆರ್ಪಿಎಫ್ ಸಿಬ್ಬಂದಿ ಮತ್ತು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am