ಬ್ರೇಕಿಂಗ್ ನ್ಯೂಸ್
23-07-26 06:26 pm HK News Desk ದೇಶ - ವಿದೇಶ
ಮುಂಬೈ, ಜುಲೈ 23: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ಹೂಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ತನಿಖೆಗೆ ಆದೇಶಿಸಿದ್ದು, ಚಾಲಕನಾಗಿದ್ದ ಪೊಲೀಸ್ ಅಧಿಕಾರಿಯನ್ನು ಹಾಲಿ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸ್ ವಾಹನದಲ್ಲಿದ್ದ ವಿದ್ಯಾರ್ಥಿಗಳಿಗೆ, "ಮತ್ತೆ ಪ್ರತಿಭಟನೆಗೆ ಬಂದರೆ ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ದಾಖಲಿಸುತ್ತೇನೆ. ಜೀವನಪೂರ್ತಿ ಜೈಲಲ್ಲೇ ಇರಬೇಕಾಗುತ್ತದೆ, ಜಾಮೀನು ಕೂಡ ಸಿಗುವುದಿಲ್ಲ" ಎಂದು ಬೆದರಿಕೆ ಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ಬೆದರಿಕೆ ಹಾಕಿದ ಪೊಲೀಸ್ ಸಿಬ್ಬಂದಿಯನ್ನು ಪವನ್ ಸಾಂಗ್ಲೆ ಎಂದು ಗುರುತಿಸಲಾಗಿದ್ದು, ಆತ ಮುಂಬೈ ಪೊಲೀಸ್ ಮೋಟಾರ್ ಟ್ರಾನ್ಸ್ಪೋರ್ಟ್ (MT) ವಿಭಾಗದಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಿವಾಜಿ ಪಾರ್ಕ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿರಿಯ ಅಧಿಕಾರಿಗಳಿಗೆ ಸಹಾಯ ಮಾಡಲು ಅವರನ್ನು ನಿಯೋಜಿಸಲಾಗಿತ್ತು.
ವಿಡಿಯೊ ವೈರಲ್ ಆಗಿ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಪವನ್ ಸಾಂಗ್ಲೆಯನ್ನ ತಕ್ಷಣದಿಂದಲೇ ಅಮಾನತುಗೊಳಿಸಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದ ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪೊಲೀಸ್ ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಲಾಗಿದೆ.
ಇದಕ್ಕೂ ಮುನ್ನ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮುಂಬೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯ ಬೆದರಿಕೆ ವಿಡಿಯೊ ಹೊರಬಿದ್ದಿದ್ದು, ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am