ಬ್ರೇಕಿಂಗ್ ನ್ಯೂಸ್
24-07-26 11:18 am HK News Staffer ದೇಶ - ವಿದೇಶ
ನವದೆಹಲಿ, ಜುಲೈ 24: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್, ಕೇಂದ್ರ ಸರ್ಕಾರದ ಖಚಿತ ಭರವಸೆಗಳ ಬಳಿಕ ತಮ್ಮ ಉಪವಾಸ ಕೊನೆಗೊಳಿಸಿದ್ದಾರೆ.
ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ.
ಗುರುವಾರ ಮಧ್ಯರಾತ್ರಿ ಗುರ್ಗಾಂವ್‌ನ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿಯಾಗಿ ಸರ್ಕಾರದ ಪರವಾಗಿ ಹಲವು ಭರವಸೆಗಳನ್ನು ನೀಡಿದರು. ಬಳಿಕ ಲಡಾಖ್‌ನ ಅಪೆಕ್ಸ್ ಬಾಡಿ ಹಿರಿಯ ನಾಯಕರು, ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಹಾಗೂ ವೈದ್ಯರ ಸಮ್ಮುಖದಲ್ಲಿ ವಾಂಗ್ಚುಕ್ 26 ದಿನಗಳ ಉಪವಾಸವನ್ನು ಕೊನೆಗೊಳಿಸಿದರು.
ಉಪವಾಸ ಅಂತ್ಯಗೊಳಿಸಿದ ಬಳಿಕ ಎಕ್ಸ್ (X)ನಲ್ಲಿ ಪ್ರತಿಕ್ರಿಯಿಸಿದ ವಾಂಗ್ಚುಕ್, "ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ.ಜಿತೇಂದ್ರ ಸಿಂಗ್ ಹಾಗೂ ಲಡಾಖ್ ಅಪೆಕ್ಸ್ ಬಾಡಿಯ ಹಿರಿಯ ನಾಯಕರ ಸಮ್ಮುಖದಲ್ಲಿ 26 ದಿನಗಳ ಉಪವಾಸ ಅಂತ್ಯಗೊಳಿಸಿದ್ದೇನೆ. ಹಲವು ಷರತ್ತುಗಳ ಕುರಿತು ದೀರ್ಘ ಮಾತುಕತೆ ನಡೆದಿದ್ದು, ದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಈ ಕುರಿತು ಎಲ್ಲ ವಿವರಗಳನ್ನು ಶೀಘ್ರದಲ್ಲೇ ಪ್ರತ್ಯೇಕ ವಿಡಿಯೊದಲ್ಲಿ ಹಂಚಿಕೊಳ್ಳುತ್ತೇನೆ. ಅಷ್ಟರವರೆಗೆ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡಬೇಡಿ" ಎಂದು ಮನವಿ ಮಾಡಿದ್ದಾರೆ.
ವಾಂಗ್ಚುಕ್ ಅವರು ತಮ್ಮ ಉಪವಾಸದ ಅವಧಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ 65ಕ್ಕೂ ಹೆಚ್ಚು ಸಂಸದರು ಅವರನ್ನು ಭೇಟಿ ಮಾಡಿ ಅಥವಾ ಪತ್ರದ ಮೂಲಕ ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಕೂಡ ವಾಂಗ್ಚುಕ್ ಅವರ ಉಪವಾಸ ಅಂತ್ಯಗೊಳಿಸಿರುವುದನ್ನು ಸ್ವಾಗತಿಸಿದ್ದಾರೆ.
ಪ್ರಧಾನ್ ರಾಜಿನಾಮೆ ನೀಡೋ ವರೆಗೂ ಪ್ರತಿಭಟನೆ ; ಸಿಜೆಪಿ
ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, "ಸೋನಂ ಸರ್ 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿರುವುದು ನಮಗೆ ನೆಮ್ಮದಿ ತಂದಿದೆ. ದೇಶದ ಹಿತಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟ ಅವರ ತ್ಯಾಗಕ್ಕೆ ನಾವು ಸದಾ ಋಣಿಯಾಗಿದ್ದೇವೆ. ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಜಂತರ್ ಮಂತರ್‌ನಲ್ಲಿ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಸಿಜೆಪಿ ಪ್ರಮುಖವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಪಾರದರ್ಶಕ ತನಿಖೆ, ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ದಾಖಲಿಸಿರುವ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಆಗ್ರಹಿಸಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am