ಬ್ರೇಕಿಂಗ್ ನ್ಯೂಸ್
28-07-26 11:56 am HK News Staffer ದೇಶ - ವಿದೇಶ
ನವದೆಹಲಿ, ಜುಲೈ 28: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ತಿಳಿಸಿದ್ದಾರೆ.
ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.
ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು.
ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm