ಬ್ರೇಕಿಂಗ್ ನ್ಯೂಸ್
08-01-21 02:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.8 : ರೂಪಾಂತರಿ ಕೊರೋನಾ ವೈರಸ್ ಆತಂಕದ ಮಧ್ಯೆಯೇ ಬ್ರಿಟನ್‍ನಿಂದ ವಿಮಾನ ಆಗಮಿಸಿದ್ದು ಏರ್ ಇಂಡಿಯಾದಲ್ಲಿ 246 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಂದಿದೆ.
ಹೊಸ ವೈರಸ್ ಕಾಣಿಸಿಕೊಂಡ ಬೆನ್ನಿಗೆ ಕೇಂದ್ರ ಸರಕಾರವು ಡಿಸೆಂಬರ್ 23 ರಂದು ಬ್ರಿಟನ್‍ಗೆ ತೆರಳುವ ಹಾಗೂ ಅಲ್ಲಿಂದ ಬರುವ ವಿಮಾನಗಳನ್ನು ಡಿ.31ರ ತನಕ, ಆ ನಂತರ ಜ.6ರ ತನಕ ನಿರ್ಬಂಧಿಸಿತ್ತು. ಈಗಾಗಲೇ ಬ್ರಿಟನ್ ನಿಂದ ಬಂದವರಿಗೆ ಕಾಣಿಸಿಕೊಂಡಿರುವ ರೂಪಾಂತರಿ ವೈರಸ್ ಪ್ರಕರಣಗಳ ಸಂಖ್ಯೆ ದೇಶದಲ್ಲಿ 82ಕ್ಕೇರಿದ್ದು ಇದರ ನಡುವಲ್ಲೇ ಜ.7ರಿಂದ ಮತ್ತೆ ಭಾರತ- ಬ್ರಿಟನ್ ನಡುವಿನ ವಿಮಾನ ಸಂಚಾರ ಆರಂಭಿಸಲಾಗಿದೆ.
ಪ್ರತಿವಾರ 30 ವಿಮಾನಗಳು ಕಾರ್ಯಾಚರಿಸಲಿದ್ದು ಭಾರತ ಹಾಗೂ ಬ್ರಿಟನ್ ನಿಂದ ತಲಾ 15 ವಿಮಾನಗಳು ವಿನಿಮಯ ಆಗಲಿವೆ. ಜನವರಿ 23ರ ತನಕ ವಿಮಾನ ಹಾರಾಟಕ್ಕೆ ಮಿತಿ ಹೇರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಬ್ರಿಟನ್ ನಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಬ್ರಿಟನ್‍ನಿಂದ ಬರುವ- ಅಲ್ಲಿಗೆ ಹೋಗುವ ವಿಮಾನಗಳಿಗೆ ಕನಿಷ್ಠ ಜನವರಿ 31ರ ತನಕ ನಿಷೇಧ ಮುಂದುವರಿಸಬೇಕೆಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಕೇಂದ್ರ ಸರಕಾರವನ್ನು ವಿನಂತಿಸಿದ್ದಾರೆ.
ಇಂಥ ಸಂಕಷ್ಟದ ಸಮಯದಲ್ಲಿ ಸರಕಾರ ಯಾಕೆ ಬ್ರಿಟನ್ ವಿಮಾನಕ್ಕೆ ಅವಕಾಶ ಕೊಡಬೇಕು. ಇದರಿಂದ ಜನರನ್ನು ಅಪಾಯಕ್ಕೆ ಒಡ್ಡಿದಂತಾಗಲ್ಲವೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಬ್ರಿಟನ್ ನಿಂದ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಅಲ್ಲದೆ, ನೆಗೆಟಿವ್ ಆಗಿದ್ದರೂ ಇಲ್ಲಿ ಬಂದ ಮೇಲೆ 14 ದಿನ ಕ್ವಾರಂಟೈನ್ ಇರಬೇಕು ಎಂದು ಹೊಸ ಮಾರ್ಗಸೂಚಿ ನೀಡಲಾಗಿದೆ.
An Air India flight from UK has landed in Delhi with 246 passengers on board amid concerns about a mutant fast-spreading strain of the coronavirus that emerged in Britain.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm