ಬ್ರೇಕಿಂಗ್ ನ್ಯೂಸ್
19-09-26 05:40 pm HK News Staffer ದೇಶ - ವಿದೇಶ
ಮಂಗಳೂರು, ಸೆ.19: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ, ಮುಂದಿನ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತಾವಧಿ ಮುಗಿದಿದ್ದು, ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆ ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಹೀಗಾಗಿ ಅಗತ್ಯವಿರುವ ನೂತನ ಮತಪೆಟ್ಟಿಗೆಗಳ ಖರೀದಿ ಹಾಗೂ ಮತದಾನ ಪ್ರಕ್ರಿಯೆ ಆರಂಭಿಸಲು 151.31 ಕೋಟಿ ರೂಪಾಯಿಗಳ ಆಡಳಿತಾತ್ಮಕ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ರಾಜಕೀಯ ಅಖಾಡದಲ್ಲಿ ಚಟುವಟಿಕೆ ಗರಿಗೆದರಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಆಡಳಿತಾರೂಢ ಕಾಂಗ್ರೆಸ್, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಸಿದ್ಧತೆ ಆರಂಭಿಸಿದೆ. ಇತ್ತೀಚೆಗಷ್ಟೇ ನೇಮಕಗೊಂಡ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಹೊಸ ಅಧ್ಯಕ್ಷರಿಗೆ ಈ ಬಗ್ಗೆ ಟಾಸ್ಕ್ ನೀಡಲಾಗಿದೆ.
The Karnataka Cabinet has taken a key decision to conduct elections to Gram Panchayats, Taluk Panchayats and Zilla Panchayats by December 2026. The decision was taken at the special Cabinet meeting chaired by Chief Minister D K Shivakumar in Mangaluru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am