ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರೋಹಿ ; 48 ಗಂಟೆಯಲ್ಲಿ ರಾಜಿನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ, ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಎಚ್ಚರಿಕೆ

24-09-26 09:42 pm       HK News Staffer   ದೇಶ - ವಿದೇಶ

ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಲೋಪ ಆಗಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಂದ್ರ ಕುಮಾರ್ ಅವರನ್ನು ದೇಶದ್ರೋಹಿ ಎಂದು ಆರೋಪಿಸಿದ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ 48 ಗಂಟೆಗಳಲ್ಲಿ ರಾಜಿನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ನವದೆಹಲಿ, ಸೆ.24: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಲೋಪ ಆಗಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಂದ್ರ ಕುಮಾರ್ ಅವರನ್ನು ದೇಶದ್ರೋಹಿ ಎಂದು ಆರೋಪಿಸಿದ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ 48 ಗಂಟೆಗಳಲ್ಲಿ ರಾಜಿನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. 

ಜ್ಞಾನೇಶ್‌ ಕುಮಾರ್ ಬಿಜೆಪಿ ಸೂಚನೆಯ ಮೇರೆಗೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಉದ್ದೇಶಪೂರ್ವಕ ತೆಗೆದುಹಾಕಿದ್ದಾರೆ. ಎಲ್ಲಾ ರಾಜ್ಯಗಳಲ್ಲಿಯೂ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕಾರ್ಯ ನಿರ್ವಹಿಸುತ್ತಿದೆ" ಎಂದು ಸಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ದೀಪ್ಕೆ, ಜ್ಞಾನೇಶ್ ಕುಮಾರ್‌ ಅತಿ ದೊಡ್ಡ ದೇಶದ್ರೋಹಿ. ಬಿಜೆಪಿ ನಿರ್ದೇಶನದಂತೆ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಿದ್ದಾರೆ ಎಂದು ಆರೋಪಿಸಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಮತದಾನದ ಹಕ್ಕನ್ನು ದುರ್ಬಲಗೊಳಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅವರು ಹೇಳಿದರು.

"ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲೇಬೇಕು ಎಂದು ದೀಪ್ಕೆ ಆಗ್ರಹಿಸಿದ್ದಾರೆ. 48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ, ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ಆರಂಭಿಸಲಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

ಬಿಜೆಪಿಯ ಚುನಾವಣಾ ಗೆಲುವುಗಳ ಹಿಂದಿನ ನಿಜವಾದ ಶಕ್ತಿ ಸಿಇಸಿ ಜ್ಞಾನೇಶ್ ಕುಮಾರ್. ಬಿಜೆಪಿಯ ಈ ಸಾಧನೆಯ ನಿಜವಾದ ರೂವಾರಿ ಅವರೇ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅವರ ನೇಮಕಾತಿಯ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಹರಿಯಾಣ, ಅಸ್ಸಾಂ ಮತ್ತು ಇತರ ರಾಜ್ಯಗಳಲ್ಲಿ ಬಿಜೆಪಿಯ ಮತಗಳ ಪ್ರಮಾಣ ಹೆಚ್ಚಾಗಿದೆ ಎಂದು ಅಭಿಜಿತ್‌ ದಿಪ್ಕೆ ಆರೋಪಿಸಿದ್ದಾರೆ. 

ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು, ಕಳೆದ 10 ತಿಂಗಳಲ್ಲಿ ಚುನಾವಣಾ ಆಯೋಗದ ನಿರ್ಧಾರಗಳು ಮತ್ತು ಆದೇಶಗಳ ವಿರುದ್ಧ ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿಗಳ ಬಳಿಕ, ವಿಪಕ್ಷಗಳು ಒಟ್ಟಾಗಿ ಮುಖ್ಯ ಚುನಾವಣಾ ಆಯುಕ್ತ ಅಭಿಜಿತ್‌ ದೀಪ್ಕೆ ವಿರುದ್ಧ ಮುಗಿಬಿದ್ದಿವೆ.

The Cockroach Janta Party (CJP) has demanded the resignation of Chief Election Commissioner Gyanesh Kumar within 48 hours, alleging irregularities in the ongoing Special Intensive Revision (SIR) of electoral rolls. CJP founder Abhijeet Dipke warned that the organisation would launch a nationwide agitation if Kumar does not step down