ಬ್ರೇಕಿಂಗ್ ನ್ಯೂಸ್
01-10-26 11:05 am HK News Staffer ದೇಶ - ವಿದೇಶ
ನವದೆಹಲಿ, ಅ.1: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಪೈಲಟ್ ಗಳ ಹೊಡೆದಾಟದಿಂದ ಸಂಭವಿಸಿದ ಗಂಭೀರ ಹಲ್ಲೆಯ ನಡುವೆಯೂ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿ ಧೈರ್ಯ ತೋರಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ ಪ್ರಯಾಣಿಕರ ಸುರಕ್ಷತೆಗಾಗಿ ಅವರು ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆ ದೊಡ್ಡ ಅನಾಹುತ ತಪ್ಪಿಸಲು ನೆರವಾಯಿತು ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ಕ್ಯಾಪ್ಟನ್ ಮಚ್ಚರ್ ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ ಇತರರ ಜೀವ ರಕ್ಷಿಸಲು ಅಸಾಧಾರಣ ಧೈರ್ಯ ತೋರಿದ್ದಾರೆ ಎಂದು ಹೇಳಿದ್ದಾರೆ. ಅವರ ಸಾಹಸ ನೂರಾರು ಪ್ರಯಾಣಿಕರ ಜೀವ ಉಳಿಸಲು ಮತ್ತು ದೊಡ್ಡ ದುರಂತ ತಪ್ಪಿಸಲು ನೆರವಾಯಿತು ಎಂದು ತಿಳಿಸಿದ್ದಾರೆ. ಮಚ್ಚರ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ವಿಮಾನದಲ್ಲಿ ನಡೆದಿದ್ದೇನು?
ಫ್ಲೈದುಬೈಯ FZ1073 ವಿಮಾನವು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿತ್ತು. ಬೋಯಿಂಗ್ 737 ವಿಮಾನದಲ್ಲಿ 174 ಪ್ರಯಾಣಿಕರಿದ್ದರು. ಹಾರಾಟದ ವೇಳೆ ಕಾಕ್‌ಪಿಟ್‌ನಲ್ಲಿ ಇಬ್ಬರು ಪೈಲಟ್‌ಗಳ ನಡುವೆ ಗಂಭೀರ ಸಂಘರ್ಷ ನಡೆದಿದ್ದು, ಈ ವೇಳೆ ಸಹ-ಪೈಲಟ್ ಕ್ಯಾಪ್ಟನ್ ಮಚ್ಚರ್ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಮಚ್ಚರ್ ಗಂಭೀರವಾಗಿ ಗಾಯಗೊಂಡಿದ್ದರೂ ಪ್ರತಿರೋಧ ತೋರಿಸಿ ಕಾಕ್‌ಪಿಟ್ ಬಾಗಿಲು ತೆರೆದಿದ್ದಾರೆ. ಈ ವೇಳೆ ಪ್ರಯಾಣಿಕರು ಮತ್ತು ಸಿಬ್ಬಂದಿ ಕಾಕ್‌ಪಿಟ್‌ಗೆ ಪ್ರವೇಶಿಸಿ ದಾಳಿಕೋರನನ್ನು ನಿಯಂತ್ರಿಸಿದ್ದಾರೆ. ಬಳಿಕ ಇತರ ಪೈಲಟ್‌ಗಳು ವಿಮಾನದ ನಿಯಂತ್ರಣ ವಹಿಸಿಕೊಂಡು ಸೌದಿ ಅರೇಬಿಯಾದ ತಬೂಕ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಿದರು.


ತುರ್ತು ಸಂಕೇತದಿಂದ ಹೆಚ್ಚಿದ ಆತಂಕ
ಘಟನೆಯ ವೇಳೆ ವಿಮಾನದಿಂದ ತುರ್ತು ಸಂಕೇತಗಳು ರವಾನೆಯಾಗಿದ್ದು, ವಿಮಾನದ ಸ್ಥಿತಿ ಕುರಿತು ಗಂಭೀರ ಆತಂಕ ಮೂಡಿತ್ತು. ವಿಮಾನವು ತನ್ನ ಮಾರ್ಗ ಬದಲಿಸಿ ತಬೂಕ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು.
ಕ್ಯಾಪ್ಟನ್ ಮಚ್ಚರ್ ಅವರನ್ನು ತಬೂಕ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಭಾರತೀಯ ರಾಯಭಾರ ಕಚೇರಿಯ ಮಾಹಿತಿಯಂತೆ ಅವರು ಸ್ಥಿರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ನೆತನ್ಯಾಹು ಕೂಡ ಶ್ಲಾಘನೆ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ ದಾಳಿಯನ್ನು ಎದುರಿಸಿ ಕಾಕ್‌ಪಿಟ್ ಬಾಗಿಲು ತೆರೆಯುವ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಪರಿಸ್ಥಿತಿ ನಿಯಂತ್ರಿಸಲು ಅವಕಾಶ ಕಲ್ಪಿಸಿದರು ಎಂದು ನೆತನ್ಯಾಹು ಹೇಳಿದ್ದಾರೆ.
ಘಟನೆಯ ನಿಖರ ಕಾರಣ, ಸಹ-ಪೈಲಟ್‌ನ ಉದ್ದೇಶ ಹಾಗೂ ಕಾಕ್‌ಪಿಟ್‌ನಲ್ಲಿ ನಡೆದ ಸಂಪೂರ್ಣ ಬೆಳವಣಿಗೆಗಳ ಕುರಿತು ತನಿಖೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.
Indian Prime Minister Narendra Modi and Israeli Prime Minister Benjamin Netanyahu have praised Indian pilot Captain Smit Machchhar for his courage during a violent cockpit incident aboard a Flydubai flight from Dubai to Tel Aviv. Despite suffering serious injuries, Machchhar helped enable passengers and crew to overpower the attacker, averting a potentially catastrophic situation.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
01-10-26 11:46 am
HK News Staffer
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
ಅರಬ್ಬೀ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ ರಾಕೆ...
30-09-26 10:49 am
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
01-10-26 10:25 am
HK News Staffer
Mrpl fire accident, Church Damage: ಎಂಆರ್ ಪಿಎಲ...
30-09-26 10:24 pm
ಅನುದಾನ ಮಂಜೂರು ವಿಚಾರದಲ್ಲಿ ಮೊಂಡಾಟ! ಕೋಟೆಕಾರು ಪ....
30-09-26 09:44 pm
suresh kumar, ut khadar, urdhu habba: ವಿಧಾನಸೌ...
30-09-26 09:41 pm
Mrpl fire, One dead: ಎಂಆರ್ ಪಿಎಲ್ ತೈಲ ಸ್ಥಾವರದಲ...
30-09-26 05:33 pm
01-10-26 11:10 am
HK News Staffer
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm
ಉಡುಪಿಯಲ್ಲಿ ಹೆಲ್ಮೆಟ್ ಧರಿಸಿ ದುರ್ಗಾಂಬ ಬಸ್ ಕಳವು ;...
30-09-26 10:33 am
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am