ಬ್ರೇಕಿಂಗ್ ನ್ಯೂಸ್
05-10-26 01:49 pm HK News Staffer ದೇಶ - ವಿದೇಶ
ಕೊಲ್ಕೊತ್ತಾ, ಅ.5: ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದರ ಜೊತೆಗೆ, ‘ಲವ್ ಜಿಹಾದ್’ ಹಾಗೂ ‘ಲ್ಯಾಂಡ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ಬಿಜೆಪಿ ಆಡಳಿತದ ಉತ್ತರಾಖಂಡ ಮತ್ತು ಗುಜರಾತ್ ಮಾದರಿಯನ್ನು ಉಲ್ಲೇಖಿಸಿದ ಅವರು, ಮುಂದಿನ ಆರು ತಿಂಗಳಲ್ಲಿ ಮಹತ್ವದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್‌ನ ಮಾಜಿ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸುವೇಂದು, ಸರ್ಕಾರವು ಸಂವಿಧಾನದ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಭಾರತೀಯ ಸಂಸ್ಕೃತಿ, ಸನಾತನ ಪರಂಪರೆ, ದೇವಾಲಯಗಳು, ಮಠಗಳು ಹಾಗೂ ದೇಶದ ಆಧ್ಯಾತ್ಮಿಕ ಪರಂಪರೆಯ ಮೇಲೆ ಯಾವುದೇ ದಾಳಿ ಅಥವಾ ಅವಹೇಳನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಉತ್ತರಾಖಂಡ ಮತ್ತು ಗುಜರಾತ್‌ನಲ್ಲಿ ಜಾರಿಯಾಗಿರುವ UCC ಕ್ರಮಗಳನ್ನು ಉಲ್ಲೇಖಿಸಿದ ಅವರು, ಪಶ್ಚಿಮ ಬಂಗಾಳವೂ ಇದೇ ದಿಕ್ಕಿನಲ್ಲಿ ಸಾಗಲಿದೆ ಎಂದರು. ವಿವಾಹ ನಿಯಮಗಳು, ವಿಚ್ಛೇದನ, ಆಸ್ತಿ ವಾರಸುದಾರಿಕೆ ಮತ್ತು ದತ್ತು ಸೇರಿದಂತೆ ನಾಗರಿಕ ವಿಚಾರಗಳಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಕಾನೂನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈಗಾಗಲೇ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವರದಿ ಆಧರಿಸಿ ಏಕರೂಪದ ಸಂಹಿತೆ ಜಾರಿಗೆ ತರುವ ಸಾಧ್ಯತೆಯಿದೆ.
ರಾಜ್ಯದಲ್ಲಿ ರಾಷ್ಟ್ರೀಯವಾದಿ ಸರ್ಕಾರವನ್ನು ಅಸ್ಥಿರಗೊಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಸುವೇಂದು ಅಧಿಕಾರಿ, ಜನರು ವಿಭಜನ ಶಕ್ತಿಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದರು. ಇದೇ ವೇಳೆ, ಧಾರ್ಮಿಕ ಪ್ರವಾಸೋದ್ಯಮ ಸರ್ಕ್ಯೂಟ್ ಯೋಜನೆಗೆ 1,000 ಕೋಟಿ ಮೀಸಲಿಡಲಾಗಿದ್ದು, ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿಯಿದೆ ಎಂದು ತಿಳಿಸಿದರು. ನವೆಂಬರ್‌ನಲ್ಲಿ 20 ಸಾವಿರ ಜನರಿಂದ ಹನುಮಾನ್ ಚಾಲೀಸಾ ಪಠಣ ಹಾಗೂ ಡಿಸೆಂಬರ್ 29ರಂದು 10 ಲಕ್ಷ ಜನರ ಸಾಮೂಹಿಕ ಗೀತಾ ಪಠಣದಂತಹ ಕಾರ್ಯಕ್ರಮಗಳನ್ನೂ ಅವರು ಘೋಷಿಸಿದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 01:49 pm
HK News Staffer
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm