ಬ್ರೇಕಿಂಗ್ ನ್ಯೂಸ್
06-10-26 11:04 pm HK News Desk ದೇಶ - ವಿದೇಶ
ನವದೆಹಲಿ, ಅ.6 ಎಸ್ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರನ್ನು 9 ಗಂಟೆಗಳ ಧರಣಿ ಬಳಿಕ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನಾ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಚರಣ್ಜಿತ್ ಸಿಂಗ್ ಚನ್ನಿ, ದೀಪೇಂದರ್ ಹೂಡಾ ಮತ್ತು ಪವನ್ ಖೇರಾ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗದ ಮೂಲಗಳ ಪ್ರಕಾರ, ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನಾ ಸಭೆಗಾಗಿ ಆಯೋಗಕ್ಕೆ ಯಾವುದೇ ವಿನಂತಿ ಬಂದಿರಲಿಲ್ಲ. ಹೀಗಾಗಿ ಪೊಲೀಸರು ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.



ಬೆಳಗ್ಗೆ ಧರಣಿ ವೇಳೆ, 300ಕ್ಕೂ ಹೆಚ್ಚು ಸಂಸದರು ಚುನಾವಣಾ ಆಯುಕ್ತರನ್ನು ಭೇಟಿಯಾಗಲು ಬಂದಿದ್ದೇವೆ. ಭೇಟಿಯಾಗದೇ ತೆರಳುವುದಿಲ್ಲ. ಚುನಾವಣಾ ಆಯೋಗವನ್ನು ಭೇಟಿ ಮಾಡಿ 'ನೀವು ಮತವನ್ನು ಕದ್ದಿದ್ದೀರಿ' ಎಂದು ಹೇಳಲು ಬಯಸಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಆದರೆ ರಾಹುಲ್ ಗಾಂಧಿಯನ್ನು ಆಯೋಗದ ಕಚೇರಿಯಿರುವ ಕಟ್ಟಡ ಪ್ರವೇಶವನ್ನು ತಡೆಯಲಾಗಿತ್ತು. ಹೀಗಾಗಿ ಅವರು ಅಲ್ಲಿಯೇ ಮರದ ಕೆಳಗೆ ಕುಳಿತಿದ್ದರು. ಚುನಾವಣಾ ಆಯೋಗವು ತಾನು ಇಲ್ಲಿ ಕುಳಿತುಕೊಳ್ಳಬಾರದು ಎಂದು ಬಯಸಿದರೆ, ದೆಹಲಿಯ ಯಾವುದೇ ಸ್ಥಳವನ್ನು ಅವರಿಗೆ ತಿಳಿಸಬಹುದು. ತಾನು ಅಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಹೇಳಿದ್ದರು. ಆನಂತರ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಚುನಾವಣಾ ಆಯೋಗದಿಂದ ಸುಮಾರು 200 ಮೀಟರ್ ದೂರದಲ್ಲಿ ಧರಣಿ ಪ್ರತಿಭಟನೆ ನಡೆಸಿದರು. ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ದರು. ರಾತ್ರಿ ವೇಳೆಗೆ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದರು.
Congress MP Rahul Gandhi and Priyanka Gandhi Vadra were detained by Delhi Police after staging a nearly nine-hour protest against the Special Intensive Revision (SIR) and the Election Commission.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm