ಬ್ರೇಕಿಂಗ್ ನ್ಯೂಸ್
07-10-26 01:10 pm HK News Staffer ದೇಶ - ವಿದೇಶ
ವಾಷಿಂಗ್ಟನ್ , ಅಕ್ಟೋಬರ್ 07: ಆಕಾಶದಲ್ಲೇ ಎದುರಾದ ಭೀಕರ ಅಪಾಯದ ನಡುವೆಯೂ ಕರ್ತವ್ಯಪ್ರಜ್ಞೆ ಹಾಗೂ ಧೈರ್ಯದಿಂದ ಕಾರ್ಯನಿರ್ವಹಿಸಿ ಫ್ಲೈದುಬೈ ವಿಮಾನದ ಪ್ರಯಾಣಿಕರ ಜೀವ ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಸಾಹಸಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಗೌರವ ವ್ಯಕ್ತವಾಗಿದೆ. ಸೆಪ್ಟೆಂಬರ್ 30ರಂದು ನಡೆದ FZ1073 ವಿಮಾನದ ಕಾಕ್‌ಪಿಟ್ ದಾಳಿಯನ್ನು ಉಲ್ಲೇಖಿಸಿ, ಮಚ್ಚಾರ್ ಸೇರಿದಂತೆ ವಿಮಾನದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಗೌರವಿಸುವ ದ್ವಿಪಕ್ಷೀಯ ನಿರ್ಣಯವನ್ನು ಅಮೆರಿಕ ಸಂಸದರು ಮಂಡಿಸಿದ್ದಾರೆ.
ಸೆಪ್ಟೆಂಬರ್ 30ರಂದು ಫ್ಲೈದುಬೈ FZ1073 ವಿಮಾನ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ರೇಲ್‌ನ ಟೆಲ್ ಅವೀವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದತ್ತ ತೆರಳುತ್ತಿತ್ತು. ವಿಮಾನದಲ್ಲಿ ಸುಮಾರು 174 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ 27 ಮಕ್ಕಳು ಹಾಗೂ ನಾಲ್ವರು ಅಮೆರಿಕದ ನಾಗರಿಕರೂ ಇದ್ದರು ಎಂದು ಅಮೆರಿಕದ ಸಂಸದರ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ವಿಮಾನ ಹಾರಾಟದಲ್ಲಿದ್ದ ವೇಳೆ ಸಹ-ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ಕಾಕ್‌ಪಿಟ್‌ನಲ್ಲೇ ದಾಳಿ ನಡೆಸಿ ವಿಮಾನದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ದಾಳಿಯ ನಂತರ ವಿಮಾನ ಕೆಲವೇ ಸೆಕೆಂಡ್‌ಗಳಲ್ಲಿ ಸುಮಾರು 14,000 ಅಡಿಗೂ ಹೆಚ್ಚು ಎತ್ತರ ಕಳೆದುಕೊಂಡಿತ್ತು. ಗಂಭೀರ ಗಾಯಗೊಂಡಿದ್ದರೂ ಮಚ್ಚಾರ್ ಕಾಕ್‌ಪಿಟ್ ಬಾಗಿಲು ತೆರೆದಿದ್ದರಿಂದ ಪ್ರಯಾಣಿಕರು ಒಳನುಗ್ಗಿ ದಾಳಿಕೋರನನ್ನು ವಶಕ್ಕೆ ಪಡೆಯಲು ಸಾಧ್ಯವಾಗಿತ್ತು.
ಅಮೆರಿಕ ಸಂಸತ್ ನಿರ್ಣಯದಲ್ಲಿ ಏನಿದೆ?
ನ್ಯೂಜೆರ್ಸಿಯ ಡೆಮಾಕ್ರಟಿಕ್ ಸಂಸದ ಜೋಶ್ ಗಾಟ್‌ಹೈಮರ್ ಅವರು ಅಕ್ಟೋಬರ್ 5ರಂದು H.Res.1612 ನಿರ್ಣಯವನ್ನು ಮಂಡಿಸಿದ್ದಾರೆ. ಪ್ರಸ್ತುತ ನಿರ್ಣಯವನ್ನು ಹೌಸ್ ವಿದೇಶಾಂಗ ವ್ಯವಹಾರಗಳ ಸಮಿತಿಗೆ ಕಳುಹಿಸಲಾಗಿದೆ. ನಿರ್ಣಯದಲ್ಲಿ ಸ್ಮಿತ್ ಮಚ್ಚಾರ್ ಅವರ ಅಸಾಧಾರಣ ಧೈರ್ಯವನ್ನು ಶ್ಲಾಘಿಸಲಾಗಿದೆ. ಜೊತೆಗೆ ಕಾಕ್‌ಪಿಟ್‌ಗೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ನೆರವಾದ ಇತರ ಪೈಲಟ್‌ಗಳು, ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕರ ಸಾಹಸವನ್ನೂ ಗುರುತಿಸಲಾಗಿದೆ.
Indian pilot Captain Smit Machchhar has been honoured in the US House of Representatives for his courage during the cockpit attack aboard Flydubai Flight FZ1073, with lawmakers introducing a bipartisan resolution recognising his actions and those of the crew and passengers who helped bring the aircraft to safety.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm