ಬ್ರೇಕಿಂಗ್ ನ್ಯೂಸ್
08-10-26 08:03 pm HK News Staffer ದೇಶ - ವಿದೇಶ
ಬೆಂಗಳೂರು, ಅ. 8: ಭಾರೀ ಪರ- ವಿರೋಧಕ್ಕೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.
ನಾಗರಿಕ ಸಮಾಜದ ಗುಂಪುಗಳು, ನಾಗರಿಕ ವೇದಿಕೆಗಳು, ಕಾಕ್ರೋಚ್ ಜನತಾ ಪಾರ್ಟಿ ಹಾಗೂ ಮಿತ್ರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. SIR ಪ್ರಕ್ರಿಯೆಯಲ್ಲಿ ಸೂಕ್ತ ಮಾಹಿತಿ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆ ಅರ್ಹ ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. CJP ಸಂಸ್ಥಾಪಕ ಅಭಿಜಿತ್ ದೀಪ್ಕೆ, ವಕ್ತಾರ ಸೌರವ್ ದಾಸ್, ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್, ಖ್ಯಾತ ಯೂಟ್ಯೂಬರ್ ಧ್ರುವ್ ರಾಠೀ ಮತ್ತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾ ಸ್ಥಳದಲ್ಲಿ ‘ಜನತಾ ನ್ಯಾಯಾಲಯ’ ಆಯೋಜಿಸಲಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಮತದಾರರು ತಮ್ಮ ಹೆಸರುಗಳು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. SIRನಿಂದ ಬಾಧಿತರಾಗಿದ್ದಾರೆ ಎಂದು ಹೇಳಿಕೊಂಡವರ ವಿಡಿಯೋ ಹೇಳಿಕೆಗಳನ್ನೂ ಪ್ರದರ್ಶಿಸಲಾಯಿತು.
ಈ ವೇಳೆ ಮಾತನಾಡಿದ ಅಭಿಜಿತ್ ದೀಪ್ಕೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದರು. ‘ಪ್ರಜಾಪ್ರಭುತ್ವದ ಹತ್ಯೆ’ ಮತ್ತು ‘ಮತ ಕಳ್ಳತನ’ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದರು. ಎಸ್ಐಆರ್ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕುವ ಕ್ರಮವು ಬಿಜೆಪಿ ವಿರೋಧಿ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದರು.
ಇದೇ ವೇಳೆ, ಮಾತನಾಡಿದ ನಟ ಪ್ರಕಾಶ್ ರಾಜ್, SIR ಪ್ರಕ್ರಿಯೆಯನ್ನೇ ಮೊದಲು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. “ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾರೆ. ಇದು ಕೇವಲ ಮತಗಳನ್ನು ಅಳಿಸುವ ವಿಚಾರವಲ್ಲ; ನಾಗರಿಕರ ಹಕ್ಕು ಮತ್ತು ಘನತೆಯ ಮೇಲಿನ ದಾಳಿ” ಎಂದು ಅವರು ಟೀಕಿಸಿದರು. ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am