ಬ್ರೇಕಿಂಗ್ ನ್ಯೂಸ್
12-08-20 05:47 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಆಗಸ್ಟ್ 12: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರು ಕ್ಯಾಲಿಫೋರ್ನಿಯಾ ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಮೊದಲ ಕಪ್ಪು ಮಹಿಳೆ ಹಾಗೂ ಮೊದಲ ಏಷ್ಯನ್ ಅಮೆರಿಕ ಮಹಿಳೆಯನ್ನು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಮಾಡುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಂತಾಗಿದೆ ಎಂದು ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ “ಕಮಲಾ ಹ್ಯಾರಿಸ್” ಅವರನ್ನು ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಈ ಮೊದಲು ಜೋ ಬಿಡೆನ್ ವಿರೋಧಿಯಾಗಿದ್ದ ಕಮಲಾ, ಅಧ್ಯಕ್ಷೀಯ ಚುನಾವಣಾ ಪ್ರಚಾರ ಶುರುವಾದ ಮೇಲೆ ಕಮಲಾ ಅವರು ಬಿಡನ್ ಗೆ ನಿಕಟವರ್ತಿಯಾಗಿದ್ದರು.
ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ವೇಳೆ ಉಪಾಧ್ಯಕ್ಷೆ ಅಭ್ಯರ್ಥಿ ಆಯ್ಕೆಯ ನಿರ್ಧಾರ ತುಂಬಾ ಮಹತ್ವದ್ದಾಗಿತ್ತು. ಕಮಲಾ ಅವರನ್ನು ಉಪಾಧ್ಯಕ್ಷೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವಲ್ಲಿ ಬಿಡೆನ್ ಅವರು ನವೆಂಬರ್ ನಲ್ಲಿ ನಡೆಯಲಿರುವ ಚುನಾವಣೆಯನ್ನು ಮಾತ್ರ ದೃಷ್ಟಿಕೋನದಲ್ಲಿಟ್ಟುಕೊಂಡಿಲ್ಲ, ಬದಲಿಗೆ ಡೆಮಾಕ್ರಟಿಕ್ ಪಕ್ಷದ ಭವಿಷ್ಯದ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ವಿಶ್ಲೇಷಿಸಿದೆ.
ಕಮಲಾ ಹ್ಯಾರಿಸ್ (55ವರ್ಷ) ಅವರ ತಂದೆ ಜಮೈಕಾ ವಲಸಿಗ, ತಾಯಿ ಭಾರತೀಯ ಮೂಲದವರು. ಕಮಲಾ ಅವರು ಸ್ಯಾನ್ ಫ್ರಾನ್ಸಿಸ್ಕೋ ಜಿಲ್ಲಾ ಅಟಾರ್ನಿ ಆಗಿ ಹಾಗೂ ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am