ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm