ಬ್ರೇಕಿಂಗ್ ನ್ಯೂಸ್
25-02-21 02:17 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.25: 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್ ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.

ಮೌಲ್ಯ ಮಾಪನ ಹೇಗೆ?
ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.
12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.
Tamil Nadu Chief Minister Edappadi K Palaniswami on Thursday said that the state government has decided to promote the students of classes 9, 10, and 11 to the next class without any examinations.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am