ಬ್ರೇಕಿಂಗ್ ನ್ಯೂಸ್
05-03-21 09:37 am Headline Karnataka News Network ದೇಶ - ವಿದೇಶ
ದೆಹಲಿ, ಮಾ 5: ಬಾಲಿವುಡ್ನ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ₹ 350 ಕೋಟಿ ಮೊತ್ತದ ಅವ್ಯವಹಾರ ಪತ್ತೆ ಮಾಡಿದ್ದಾರೆ.
ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #ITaxfraud ಹ್ಯಾಷ್ಟ್ಯಾಗ್ಗಳು ಟ್ವಿಟರ್ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ. ಸಾಕಷ್ಟು ಜನರು ತೆರಿಗೆ ವಂಚನೆಯನ್ನು ಟೀಕಿಸಿದ್ದಾರೆ.
ಸಿನಿಮಾಗಳ ಬಾಕ್ಸ್ ಆಫೀಸ್ ಸಂಗ್ರಹದ ಕೇವಲ ಶೇ 2ರಷ್ಟು ಮೊತ್ತವನ್ನು ಮಾತ್ರವೇ ಆದಾಯವಾಗಿ ಘೋಷಿಸಿದ್ದಾರೆ. ₹ 20 ಕೋಟಿ ಮೊತ್ತದಷ್ಟು ಬೋಗಸ್ ಖರ್ಚಿನ ದಾಖಲೆಗಳು ಪತ್ತೆಯಾಗಿವೆ. ಇಬ್ಬರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.
ಫಾಂಟಾಮ್ ಫಿಲ್ಸ್ಮ್ ಕಂಪನಿಯ ಷೇರು ವಹಿವಾಟಿನ ಮಾಹಿತಿಯನ್ನು ತಿದ್ದಿರುವ, ಮೌಲ್ಯವನ್ನು ತಪ್ಪಾಗಿ ದಾಖಲಿಸಿರುವ ದಾಖಲೆಗಳು ಪತ್ತೆಯಾಗಿವೆ. ₹ 350 ಕೋಟಿ ಮೊತ್ತದಷ್ಟು ತೆರಿಗೆ ಬಾಧ್ಯತೆ ಇವರ ಮೇಲಿದೆ. ತಪ್ಸಿ ಪನ್ನು ಅವರು ₹ 5 ಕೋಟಿಯಷ್ಟು ತೆರಿಗೆ ಬಾಧ್ಯತೆ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫಾಂಟಾಮ್ ಫಿಲ್ಮ್ಸ್ನ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಲು ಮುಂಬೈ ಮತ್ತು ಪುಣೆಯ 28 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ರಿಲಯನ್ಸ್ ಎಂಟರ್ಟೈನ್ಮೆಂಟ್ ಸಮೂಹದ ಸಿಇಒ ಶಿಬಶೀಷ್ ಸರ್ಕಾರ್ ಮತ್ತು KWAN, ಎಕ್ಸೀಡ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳ ಮೇಲೆಯೂ ದಾಳಿ ನಡೆದಿತ್ತು. ದಾಳಿಯ ವೇಳೆ ಪತ್ತೆಯಾದ 7 ಬ್ಯಾಂಕ್ ಲಾಕರ್ಗಳ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
The Income Tax Department has detected financial irregularities of over Rs 650 crore after it raided two film production companies, two talent management companies and a leading actress, the Central Board of Direct Taxes claimed on Thursday but did not take any names.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm