ಬ್ರೇಕಿಂಗ್ ನ್ಯೂಸ್
17-03-21 03:55 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.17: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಚ್ಚತ್ತುಕೊಂಡಿದ್ದು, ಇಂದು ದೇಶದಲ್ಲಿ ಸೋಂಕು ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ಹಳ್ಳಿಯತ್ತ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಗುಜರಾತ್, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸೋಂಕು ಹೆಚ್ಚಿದ್ದು, ಸೋಂಕು ಇನ್ನಷ್ಟು ಹರಡದಂತೆ ತುರ್ತು ಕ್ರಮ ಕೈಗೊಳ್ಳುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ದೇಶದ 70 ಜಿಲ್ಲೆಗಳಲ್ಲಿ 150 ಪರ್ಸೆಂಟ್ ಕೋವಿಡ್ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ಡಿಸೆಂಬರ್ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೋವಿಡ್ ಸೋಂಕು ಕಂಡುಬಂದಿದ್ದು, ದೇಶದಲ್ಲಿ ಒಂದೇ ದಿನದಲ್ಲಿ 29 ಸಾವಿರ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಜನ ಸೇರುವ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಬ್ರೇಕ್ ಹಾಕುವಂತೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂದು ಸಲಹೆ ಮಾಡಿರುವ ಮೋದಿ, ಲಸಿಕೆ ವೇಸ್ಟ್ ಮಾಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದರು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಹತ್ತು ಶೇ.ದಷ್ಟು ಲಸಿಕೆ ವೇಸ್ಟ್ ಆಗುತ್ತಿದೆ. ಇದು ಯಾಕಾಗುತ್ತಿದೆ ಎನ್ನುವುದರ ಬಗ್ಗೆ ನಿಗಾ ವಹಿಸಬೇಕು ಎಂದು ಆಯಾ ರಾಜ್ಯ ಸರಕಾರಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕರು ಕಡ್ಡಾಯ ಮಾಸ್ಕ್ ಬಳಸಬೇಕು. ಇದರ ಜೊತೆಗೆ, ದೈಹಿಕ ಅಂತರ ಮತ್ತು ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಬೇಕು. ಈಗಾಗ್ಲೇ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ನಡೆಯುತ್ತಿದ್ದು, ಇದನ್ನು ಆದಷ್ಟು ಬೇಗ ದೇಶಾದ್ಯಂತ ಹಿರಿಯ ನಾಗರಿಕರಿಗೆ ನೀಡುವಂತಾಗಬೇಕು ಎಂದು ಪ್ರಧಾನಿ ಮೋದಿ ಸಲಹೆ ಮಾಡಿದ್ದಾರೆ.
ದೇಶದಲ್ಲಿ ಸೋಂಕಿತರ ಚೇತರಿಕೆ 96 ಶೇಕಡಾ ಇದ್ದು, ಇದೇ ವೇಳೆ, ಜಗತ್ತಿನಲ್ಲಿಯೇ ಅತಿ ಕಡಿಮೆ ಮರಣ ಪ್ರಮಾಣ ಇದೆ. ಹಾಗೆಂದು ನಮ್ಮದು ಅತಿ ಆತ್ಮವಿಶ್ವಾಸ ಆಗಬಾರದು. ಕೋವಿಡ್ ಎದುರಿಸುವ ಯಶಸ್ಸು ಎಂದೂ ನಿರ್ಲಕ್ಷ್ಯಕ್ಕೆ ಕಾರಣವಾಗಬಾರದು ಎಂದು ಹೇಳಿದ ಮೋದಿ, ಉತ್ತರ ಪ್ರದೇಶ, ಕೇರಳ, ಛತ್ತೀಸ್ ಗಢ ರಾಜ್ಯಗಳು ಏಂಟಿಜೆನ್ ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದೆ. ಆದರೆ, ಇದರಿಂದ ಸೋಂಕು ಪತ್ತೆ ಸಾಧ್ಯವಾಗಲ್ಲ. ಬದಲಿಗೆ, ಆರ್ ಟಿಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚು ಮಾಡುವುದರಿಂದ ಸೋಂಕು ಪತ್ತೆ ಸಾಧ್ಯ ಎಂದು ಹೇಳಿದರು.
ಜನರನ್ನು ಆತಂಕ ಪಡುವಂತೆ ಮಾಡುವುದು ಅಥವಾ ಭಯಕ್ಕೆ ಒಳಪಡಿಸುವುದು ನಮ್ಮ ಉದ್ದೇಶ ಅಲ್ಲ. ಬದಲಿಗೆ, ಮುಂಜಾಗ್ರತೆ ಮತ್ತು ಕಠಿಣ ನಿಯಮಗಳನ್ನು ಪಾಲಿಸಿಕೊಂಡು ಜನರನ್ನು ಸೇಫ್ ಆಗಿಸುವುದು ನಮ್ಮ ಉದ್ದೇಶ ಎಂದು ಸೂಚ್ಯವಾಗಿ ಹೇಳಿದರು ಪ್ರಧಾನಿ. ವಿಡಿಯೋ ಸಂವಾದದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಛತ್ತೀಸ್ ಗಢ ಸಿಎಂ ಭೂಪೇಶ್ ಭಾಗೆಲ್ ಭಾಗವಹಿಸಿಲ್ಲ.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
Prime Minister Narendra Modi speaks during a meeting with chief ministers of all states and Union territories over the spike in COVID-19 cases via video conferencing in New Delhi on Wednesday.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am