ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am