ಬ್ರೇಕಿಂಗ್ ನ್ಯೂಸ್
14-04-21 10:38 am Headline Karnataka News Network ದೇಶ - ವಿದೇಶ
ನವದೆಹಲಿ, ಏ. 14: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.
ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು.

ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ ಒಂದರಲ್ಲಿ 'ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುವ ಟ್ರೆಂಡ್' ಮುಂದುವರೆದಿದೆ. ಅಲ್ಲದೆ ಸುಮಾರು ಎರಡು ಲಕ್ಷ ಪ್ರಕರಣಗಳು ಗೋಚರಿಸಿವೆ.

ಮಂಗಳವಾರ 1,84,372 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 82,339 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,36,89,453ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮಂಗಳವಾರ 1,027 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ 1,72,085ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.
India reported a record single-day rise of 1,84,372 new coronavirus infections pushing the total tally of cases to 1,38,73,825, while the active cases surpassed the 13-lakh mark, according to the Union health ministry data updated on Wednesday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm